ವಿಮೋಚನಕಾಂಡ 13:6
TSK
ಏಳು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು, ಏಳನೆಯ ದಿನದಲ್ಲಿ ಯೆಹೋವನ ಘನಕ್ಕಾಗಿ ಹಬ್ಬವನ್ನು ಆಚರಿಸಬೇಕು.
TSK
Treasury of Scripture Knowledge references in ಕನ್ನಡ IRV.
ಏಳು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು, ಏಳನೆಯ ದಿನದಲ್ಲಿ ಯೆಹೋವನ ಘನಕ್ಕಾಗಿ ಹಬ್ಬವನ್ನು ಆಚರಿಸಬೇಕು.
¶ “ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನಗಳ ಕಾಲ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ನೀವು ಚೈತ್ರಮಾಸದಲ್ಲಿಯೇ ಐಗುಪ್ತದೇಶದಿಂದ ಬಿಡುಗಡೆಯಾಗಿ ಬಂದಿರಲ್ಲವೇ?
¶ “‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಯೆಹೋವನು ನೇಮಿಸಿದ ಹಬ್ಬವಾಗಬೇಕು.
ಆರು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು; ಏಳನೆಯ ದಿನದಲ್ಲಿ ನಿಮ್ಮ ದೇವರಾದ ಯೆಹೋವನಿಗಾಗಿ ಸಭೆ ಸೇರಿಬರಬೇಕು; ಆ ದಿನದಲ್ಲಿ ಯಾವ ಕೆಲಸವ ಮಾಡಬಾರದು.
ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೇ ಹುಳಿಯನ್ನು ತೆಗೆದುಹಾಕಿ ಹೊಸ ಕಣಕದಂತಾಗಿರಿ. ಯಾಕೆಂದರೆ ಈಗಾಗಲೇ ನಮ್ಮ ಪಸ್ಕ ಯಜ್ಞದ ಕುರಿಮರಿಯು ಬಲಿಯಾಗಿದೆ; ಆ ಕುರಿಮರಿ ಯಾವುದೆಂದರೆ ಕ್ರಿಸ್ತನೇ.