¶ ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬುವವರ ಪ್ರಾಂತ್ಯಗಳಲ್ಲಿ ಬೇತಷೆಯಾನ್, ಇಬ್ಲೆಯಾಮ, ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ, ತಾನಾಕ್, ಮೆಗಿದ್ದೋ ಎಂಬ ಪಟ್ಟಣಗಳೂ ಅವುಗಳಿಗೆ ಸೇರಿದ ಊರುಗಳು ಸಿಕ್ಕಿದವು.
TSK
TSK · 2 ಪೂರ್ವಕಾಲವೃತ್ತಾ 35:22
Treasury of Scripture Knowledge references in ಕನ್ನಡ IRV.
ಆಗ ಯಾರೊಬ್ಬಾಮನು ತನ್ನ ಹೆಂಡತಿಗೆ, “ನೀನು ಎದ್ದು ನನ್ನ ಹೆಂಡತಿಯೆಂದು ಯಾರಿಗೂ ಗೊತ್ತಾಗದಂತೆ ವೇಷಹಾಕಿಕೊಂಡು ಶೀಲೋವಿಗೆ ಹೋಗು. ನಾನು ಈ ಜನರಿಗೆ ಅರಸನಾಗಬೇಕೆಂದು ನನಗೆ ಮುಂತಿಳಿಸಿದ ಪ್ರವಾದಿಯಾದ ಅಹೀಯನು ಅಲ್ಲಿರುತ್ತಾನೆ.
¶ ಅರಾಮ್ಯರ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಬಾಣವನ್ನೆಸೆಯಲು ಆ ಬಾಣವು ಇಸ್ರಾಯೇಲ್ಯರ ಅರಸನಿಗೆ ಅವನ ಕವಚದ ಸಂದಿಯಲ್ಲಿ ತಾಗಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ಹಿಂತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ಕರೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ” ಎಂದು ಹೇಳಿದನು.
ಯೋಷೀಯನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಜನರು ಅವನ ನಂತರ ಅವನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅರಸನನ್ನಾಗಿ ಮಾಡಿದರು.
ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, “ನಾನು ವೇಷ ಹಾಕಿಕೊಂಡು ಯುದ್ಧ ಭೂಮಿಗೆ ಬರುತ್ತೇನೆ; ನೀನಾದರೋ ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡೇ ಬಾ” ಎಂದು ಹೇಳಿ ವೇಷ ಹಾಕಿಕೊಂಡನು; ತರುವಾಯ ಯುದ್ಧ ಭೂಮಿಗೆ ಹೋದರು.
ನೀನು ದೇವದಾರುವಿನ ಕೆಲಸದಲ್ಲಿ ಸ್ಪರ್ಧಿಸುವುದರಿಂದಲೇ ಆಳತಕ್ಕವನಾಗಿದ್ದೀಯೋ? ನಿನ್ನ ತಂದೆಯು ಎಷ್ಟೇ ಉಂಡು ಕುಡಿದರೂ ನೀತಿ ನ್ಯಾಯಗಳನ್ನಂತು ಕೈಕೊಳ್ಳುತ್ತಿದ್ದನು; ಆಗ ಅವನಿಗೆ ನೆಮ್ಮದಿಯಾಗಿತ್ತು.
¶ ಆಗ ಅವು ಭೂರಾಜರನ್ನು ಇಬ್ರಿಯ ಭಾಷೆಯಲ್ಲಿ ಅರ್ಮಗೆದ್ದೋನ್ ಎಂದು ಕರೆಯಲ್ಪಡುವ ಸ್ಥಳಕ್ಕೆ ಕೂಡಿಸಿದವು.