ದಂಡು ಹೊರಡುವಾಗ ಆರೋನನೂ ಮತ್ತು ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು, ಮುಟ್ಟಿದರೆ ಸತ್ತು ಹೋಗುವರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.
TSK
TSK · 2 ಪೂರ್ವಕಾಲವೃತ್ತಾ 35:3
Treasury of Scripture Knowledge references in ಕನ್ನಡ IRV.
ಇಸ್ರಾಯೇಲರ ದೇವರಾದ ಯೆಹೋವನು ತನ್ನ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕೂ, ಸರ್ವಸಮೂಹದವರಿಗೋಸ್ಕರ ಸೇವೆಯನ್ನು ಮಾಡುವುದಕ್ಕೂ ನಿಮ್ಮನ್ನು ಹತ್ತಿರ ಬರಮಾಡಿಕೊಂಡು, ಸಮೂಹದವರಿಂದ ನಿಮ್ಮನ್ನು ಪ್ರತ್ಯೇಕಿಸಿದ್ದು ನಿಮಗೆ ಅಲ್ಪವಾಗಿ ತೋರುತ್ತದೋ?
ಲೇವಿಯರು ಇನ್ನು ಮುಂದೆ ಆತನ ಗುಡಾರವನ್ನೂ, ಆರಾಧನಾ ಸಾಮಗ್ರಿಗಳನ್ನೂ ಹೊರುವುದು ಅವಶ್ಯವಿಲ್ಲ ಎಂದು ದಾವೀದನು ಈ ಪ್ರಕಾರ ಆಜ್ಞೆ ವಿಧಿಸಿದನು.
¶ ಸೊಲೊಮೋನನು, “ಯಾವ ಯಾವ ಸ್ಥಳಗಳಲ್ಲಿ ಯೆಹೋವನ ಮಂಜೂಷವಿತ್ತೋ ಅವೆಲ್ಲವೂ ಪವಿತ್ರಸ್ಥಾನಗಳು. ಆದುದರಿಂದ ಇಸ್ರಾಯೇಲರ ಅರಸನಾದ ದಾವೀದನ ಮನೆಯಲ್ಲಿ ಫರೋಹನ ಪುತ್ರಿಯಾದ ನನ್ನ ಹೆಂಡತಿಯು ವಾಸಿಸಬಾರದು” ಅಂದುಕೊಂಡು ಆಕೆಯನ್ನು ದಾವೀದನಗರದಲ್ಲಿರಿಸದೆ, ತಾನು ಆಕೆಗಾಗಿ ಕಟ್ಟಿಸಿದ ಮಂದಿರಕ್ಕೆ ಕರೆದುಕೊಂಡು ಬಂದನು.
ಇವರ ಜೊತೆಯಲ್ಲಿ ಶೆಮಾಯ, ನೆತನ್ಯ, ಜೆಬದ್ಯ, ಅಸಾಹೇಲ್, ಶೆಮೀರಾಮೋತ್, ಯೆಹೋನಾತಾನ್, ಅದೋನೀಯ, ಟೋಬೀಯ, ಟೋಬದೋನೀಯ ಎಂಬ ಲೇವಿಯರು ಇದ್ದರು. ಎಲೀಷಾಮಾ, ಯೆಹೋರಾಮ್,
ಹಿಜ್ಕೀಯನು ಯೆಹೋವನ ಸೇವೆಯಲ್ಲಿ ನಿಪುಣರಾದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತನಾಡಿದನು. ನೇಮಕವಾದ ಏಳು ದಿನಗಳ ಹಬ್ಬದವರೆಗೂ ಜನರು ಸಮಾಧಾನ ಯಜ್ಞಗಳನ್ನು ಅರ್ಪಿಸುತ್ತಾ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಅರಿಕೆಮಾಡಿಕೊಳ್ಳುತ್ತಾ ಔತಣಮಾಡಿದರು.
ಆ ಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮಿನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮನಿಯಮದ ಸಾರವನ್ನು ಜನರು ಗ್ರಹಿಸುವಂತೆ ವಿವರಿಸಿದರು.
ನಮ್ಮನ್ನೇ ನಾವು ಪ್ರಚಾರಮಾಡಿಕೊಳ್ಳದೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನೆಂತಲೂ ಘೋಷಿಸುತ್ತೇವೆ.