¶ “‘ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು.
TSK
TSK · 2 ಪೂರ್ವಕಾಲವೃತ್ತಾ 36:14
Treasury of Scripture Knowledge references in ಕನ್ನಡ IRV.
¶ ಅರಸನಾದ ಆಹಾಜನು ಅಶ್ಶೂರದ ಅರಸನಾದ ತಿಗ್ಲತ್ಪಿಲೆಸೆರನ ದರ್ಶನಕ್ಕಾಗಿ ದಮಸ್ಕಕ್ಕೆ ಹೋದನು. ಅವನು ಅಲ್ಲಿದ್ದ ಯಜ್ಞವೇದಿಯನ್ನು ಕಂಡು, ಅದರ ಒಂದು ಪ್ರತಿಮೆಯನ್ನೂ, ಅದರ ಎಲ್ಲಾ ಅಲಂಕಾರದ ನಕ್ಷೆಯನ್ನೂ ಬರೆಯಿಸಿ, ಯಾಜಕನಾದ ಊರೀಯನಿಗೆ ಕಳುಹಿಸಿದನು.
ಯೆಹೋವನು ಯೆರೂಸಲೇಮಿನಲ್ಲಿ ತನ್ನ ಹೆಸರನ್ನು ಸದಾಕಾಲ ಸ್ಥಾಪಿಸುವುದಕ್ಕಾಗಿ ಆರಿಸಿಕೊಂಡ,
ನಾವು ನಮ್ಮ ಪೂರ್ವಿಕರ ಕಾಲದಿಂದ ಇಂದಿನ ವರೆಗೂ ಮಹಾಪರಾಧಿಗಳೇ. ನಮ್ಮ ಪಾಪಗಳ ದೆಸೆಯಿಂದ ನಾವೂ, ನಮ್ಮ ಅರಸರೂ ಮತ್ತು ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಒಪ್ಪಿಸಲ್ಪಟ್ಟು ಈಗಿರುವಂತೆ ಕತ್ತಿಗೂ, ಸೆರೆಗೂ, ಸುಲಿಗೆಗೂ, ಅಪಮಾನಕ್ಕೂ ಗುರಿಯಾದೆವು.
ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವುದು, ಕಾಡಿನ ತೋಳವು ಕೊಳ್ಳೆ ಹೊಡೆಯುವುದು, ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವುದು. ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ.
ತಮ್ಮ ಗಂಡು ಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗಾಗಿ ಆಹುತಿ ಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ಬಾಳನ ಪೂಜಾಸ್ಥಳಗಳನ್ನು ಕಟ್ಟಿ, ಯೆಹೂದವನ್ನು ಪಾಪಕ್ಕೆ ಸಿಕ್ಕಿಸಿದ್ದಾರೆ; ನಾನು ಇಂಥ ಅಸಹ್ಯಕಾರ್ಯವನ್ನು ವಿಧಿಸಲಿಲ್ಲ, ಅದರ ಸಂಕಲ್ಪವೂ ನನ್ನ ಮನಸ್ಸಿನಲ್ಲಿ ಹುಟ್ಟಲಿಲ್ಲ” ಎಂಬುದೇ.
ಆ ಮೇಲೆ ಆ ಪ್ರಧಾನರು ಅರಸನಿಗೆ, “ಒಡೆಯಾ, ಇವನಿಗೆ ಮರಣ ದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ಸಾರುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ” ಎಂದು ಹೇಳಿದರು.
¶ “‘ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು; ನೀವು ನನ್ನ ವಿಧಿಗಳನ್ನು ಕೈಕೊಳ್ಳದೆ, ನನ್ನ ನಿಯಮಗಳನ್ನು ಅನುಸರಿಸದೆ, ನಿಮ್ಮ ಸುತ್ತಲಿನ ಜನಾಂಗಗಳ ಆಚಾರಗಳನ್ನೇ ಅನುಸರಿಸಿದ್ದರಿಂದ ಇದೆಲ್ಲಾ ಆಗುವುದು.”
ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಭಂಗಮಾಡಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರ ಮಾಡಿದ್ದಾರೆ; ಮೀಸಲಾದದ್ದಕ್ಕೂ, ಮೀಸಲಿಲ್ಲದ್ದಕ್ಕೂ ಭೇದವೆಣಿಸಲಿಲ್ಲ, ಶುದ್ಧವಾದ ವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯದಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.
ನಮ್ಮ ಅರಸರು, ಪ್ರಧಾನರು, ಹಿರಿಯರು, ಸಾಮಾನ್ಯ ಜನರು, ಇವರಿಗೆಲ್ಲ ನಿನ್ನ ಹೆಸರಿನ ನಿಮಿತ್ತ ನುಡಿದ ನಿನ್ನ ಸೇವಕರಾದ ಪ್ರವಾದಿಗಳ ಕಡೆಗೆ ಕಿವಿಗೊಡಲೇ ಇಲ್ಲ.
¶ ನಾನು ಹೀಗೆ ಸಾರಿದೆನು; “ಯಾಕೋಬಿನ ಮುಖಂಡರೇ, ಇಸ್ರಾಯೇಲ್ ವಂಶದ ಅಧಿಪತಿಗಳೇ ಕಿವಿಗೊಟ್ಟು ಕೇಳಿರಿ. ನ್ಯಾಯ ನೀತಿ ಪಾಲನೆ ನಿಮ್ಮ ಕರ್ತವ್ಯವಲ್ಲವೇ? ನಿಮ್ಮ ಧರ್ಮವಲ್ಲವೇ?
ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ. ಜನರಲ್ಲಿ ಸತ್ಯವಂತರೇ ಇಲ್ಲ. ಸರ್ವರೂ ರಕ್ತಸುರಿಸಬೇಕೆಂದು ಹೊಂಚುಹಾಕುತ್ತಾರೆ. ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ.