TSK

TSK · 2 ಪೂರ್ವಕಾಲವೃತ್ತಾ 36:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇದಲ್ಲದೆ, ಯೆಹೋವನು ಮುಂತಿಳಿಸಿದ ಪ್ರಕಾರ ಅವನು ಯೆಹೋವನ ಆಲಯದ ಮತ್ತು ಅರಸನ ಅರಮನೆಯ ಭಂಡಾರಗಳಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ದ್ರವ್ಯವನ್ನು ತೆಗೆದುಕೊಂಡು ಹೋದನು. ಇಸ್ರಾಯೇಲರ ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಸಾಮಾನುಗಳನ್ನು ಮುರಿದುಬಿಟ್ಟನು.

ಅಲ್ಲಿಂದ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಕೊಳ್ಳೆಯಾಗಿ ತಂದು ತನ್ನ ದೇವರ ಗುಡಿಯಲ್ಲಿ ಇಟ್ಟಿದ್ದ ಯೆಹೋವನ ಆಲಯದ ಸಾಮಾನುಗಳನ್ನು ಪರ್ಷಿಯ ರಾಜನಾದ ಕೋರೆಷನು ಅಲ್ಲಿಂದ ತೆಗೆಸಿದನು.

ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ತೆಗೆದು ಬಾಬಿಲೋನಿಗೆ ಒಯ್ದ ಯೆಹೋವನ ಆಲಯದ ಸಕಲ ಉಪಕರಣಗಳನ್ನು ಎರಡು ವರ್ಷಗಳೊಳಗಾಗಿ ನಾನು ಪುನಃ ಈ ಸ್ಥಳಕ್ಕೆ ಸೇರಿಸುವೆನು.

ಬೇಲ್ಶಚ್ಚರನು ಅದನ್ನು ಸವಿಯುತ್ತಾ, ಯೆರೂಸಲೇಮಿನ ದೇವಾಲಯದೊಳಗಿನಿಂದ ತನ್ನ ತಂದೆಯಾದ ನೆಬೂಕದ್ನೆಚ್ಚರನು ತೆಗೆದುಕೊಂಡು ಬಂದಿದ್ದ ಬೆಳ್ಳಿ, ಬಂಗಾರಗಳ ಪಾತ್ರೆಗಳಲ್ಲಿ ತಾನೂ, ತನ್ನ ಮುಖಂಡರೂ, ಪತ್ನಿಯರೂ ಮತ್ತು ಉಪಪತ್ನಿಯರೂ ಕುಡಿಯುವುದಕ್ಕಾಗಿ ಅವುಗಳನ್ನು ತರುವಂತೆ ಆಜ್ಞಾಪಿಸಿದನು.