TSK

TSK · 2 ಪೂರ್ವಕಾಲವೃತ್ತಾ 4:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ತರುವಾಯ ಸೊಲೊಮೋನನು ಎಲ್ಲಾ ಇಸ್ರಾಯೇಲರ ಎದುರಿನಲ್ಲಿ ಯೆಹೋವನ ಯಜ್ಞವೇದಿಯ ಮುಂದೆ ನಿಂತು ಆಕಾಶದ ಕಡೆಗೆ ಕೈಗಳನ್ನೆತ್ತಿ ಹೀಗೆ ಪ್ರಾರ್ಥಿಸಿದನು,

ಸೊಲೊಮೋನನು ಯೆಹೋವನ ಆಲಯದ ಮುಂದೆ ತಾನು ಯೆಹೋವನಿಗೋಸ್ಕರ ಕಟ್ಟಿಸಿದ ಯಜ್ಞವೇದಿಯ ಮೇಲೆ ವರ್ಷಕ್ಕೆ ಮೂರು ಸಾರಿ ಸರ್ವಾಂಗಹೋಮ, ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸಿ ಧೂಪಹಾಕುತ್ತಿದ್ದನು. ಹೀಗೆ ಅವನು ದೇವಾಲಯವನ್ನು ಕಟ್ಟಿ ಸಂಪೂರ್ಣಗೊಳಿಸಿದನು.

ಇದಲ್ಲದೆ ಹೂರನ ಮಗನಾದ ಊರಿಯ, ಈತನ ಮಗನಾದ ಬೆಚಲೇಲನು ಮಾಡಿದ ತಾಮ್ರದ ಯಜ್ಞವೇದಿಯು ಅಲ್ಲೇ ಯೆಹೋವನ ಗುಡಾರದ ಮುಂದಿತ್ತು. ಸೊಲೊಮೋನನೂ ಆ ಸಮೂಹದವರೂ ಅಲ್ಲಿಗೆ ಹೋದರು.

ಆಮೇಲೆ ಅವರು ಅರಮನೆಯೊಳಗೆ ಹೋಗಿ, ಅರಸನಾದ ಹಿಜ್ಕೀಯನಿಗೆ, “ನಾವು ಯೆಹೋವನ ಸಮಸ್ತಾಲಯವನ್ನೂ, ಯಜ್ಞವೇದಿಯನ್ನೂ, ಅದರ ಉಪಕರಣಗಳನ್ನೂ, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನೂ ಹಾಗು ಅದರ ಸಾಮಾನುಗಳನ್ನೂ ಶುದ್ಧಿಮಾಡಿದೆವು.

ಯಜ್ಞವೇದಿ ಹನ್ನೆರಡು ಮೊಳ ಉದ್ದವೂ, ಹನ್ನೆರಡು ಮೊಳ ಅಗಲವೂ ಮತ್ತು ಚಚ್ಚೌಕವಾಗಿರಬೇಕು.