1 ಅರಸುಗಳು 2:12
TSK
ಸೊಲೊಮೋನನು ತನ್ನ ತಂದೆಯಾದ ದಾವೀದನ ಸಿಂಹಾಸನವನ್ನು ಏರಿದನು. ಅವನ ರಾಜ್ಯವು ಬಹಳವಾಗಿ ಬಲಗೊಂಡಿತು.
TSK
Treasury of Scripture Knowledge references in ಕನ್ನಡ IRV.
ಸೊಲೊಮೋನನು ತನ್ನ ತಂದೆಯಾದ ದಾವೀದನ ಸಿಂಹಾಸನವನ್ನು ಏರಿದನು. ಅವನ ರಾಜ್ಯವು ಬಹಳವಾಗಿ ಬಲಗೊಂಡಿತು.
ನಿನ್ನ ಆಯುಷ್ಕಾಲವು ಮುಗಿದು ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನ ಮಕ್ಕಳಲ್ಲಿ ಒಬ್ಬನನ್ನು ಅಭಿವೃದ್ಧಿಪಡಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.
ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗನಾದ ಸೊಲೊಮೋನನನ್ನು ಯೆಹೋವನ ರಾಜ್ಯ ಸಿಂಹಾಸನವಾಗಿರುವ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೋಸ್ಕರ ಆರಿಸಿಕೊಂಡನು.
ಅಂದಿನಿಂದ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲು ಅರಸನಾಗಿ ಯೆಹೋವನ ಸಿಂಹಾಸನದಲ್ಲಿ ಕುಳಿತುಕೊಂಡು ವೃದ್ಧಿಯಾಗುತ್ತಾ ಬಂದನು. ಅರಸನಾದ ಸೊಲೊಮೋನನಿಗೆ ಇಸ್ರಾಯೇಲರೆಲ್ಲರೂ ವಿಧೇಯರಾಗಿ ನಡೆಯುವವರಾದರು.
ಒಂದು ಸಂತತಿಯು ಹೋಗುವುದು, ಇನ್ನೊಂದು ಸಂತತಿಯು ಬರುವುದು, ಆದರೆ ಭೂಮಿಯು ಶಾಶ್ವತವಾಗಿ ನಿಲ್ಲುವುದು.