TSK

TSK · 2 ಪೂರ್ವಕಾಲವೃತ್ತಾ 6:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದಿಂದ ಹೊರಕ್ಕೆ ಬಂದು ಕೈಯನ್ನೆತ್ತಿ ಯೆಹೋವನನ್ನು ಪ್ರಾರ್ಥಿಸಿದನು. ಗುಡುಗೂ, ಆನೆಕಲ್ಲಿನ ಮಳೆಯೂ ನಿಂತುಹೋದವು.

ಅಲ್ಲಿ ಅರಸನು ಪದ್ದತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಅಧಿಪತಿಗಳೂ, ತುತ್ತೂರಿಯನ್ನು ಊದುವವರೂ ಅರಸನ ಹತ್ತಿರ ನಿಂತಿದ್ದರು. ದೇಶದ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.

ನೀನಂತು ಮನಸ್ಸನ್ನು ಪರಿವರ್ತಿಸಿಕೊಂಡು ದೇವರ ಕಡೆಗೆ ಕೈಗಳನ್ನೆತ್ತಿ ಸ್ತುತಿಸು.

ದೇವದೂತರುಗಳಿರಾ, ಪರಮಪ್ರಭಾವವು, ಯೆಹೋವನದೇ, ಯೆಹೋವನದೇ ಎಂದು ಹೇಳಿ ಕೊಂಡಾಡಿರಿ.

ಐಗುಪ್ತ ದೇಶದಿಂದ ರಾಯಭಾರಿಗಳು ಬರುವರು; ಕೂಷ್ ದೇಶದವರ ಕೈಗಳು ದೇವರಿಗೆ ಕಾಣಿಕೆಗಳನ್ನು ನೀಡಲಿಕ್ಕೆ ಅವಸರಪಡುವವು.

ಕೈಚಾಚಿ ಬೇಡುತ್ತೇನೆ; ಒಣನೆಲವು ನೀರಿಗಾಗಿ ಹೇಗೋ, ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. ಸೆಲಾ

¶ ಹೀಗಿರಲಾಗಿ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ವಾಗ್ವಾದವೂ ಇಲ್ಲದವರಾಗಿ, ಭಕ್ತಿಪೂರ್ವಕವಾಗಿ ಪವಿತ್ರ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ಅಪೇಕ್ಷಿಸುತ್ತೇನೆ.