TSK

TSK · 2 ಪೂರ್ವಕಾಲವೃತ್ತಾ 6:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದೇವಾಲಯದ ಪ್ರಾಕಾರದಲ್ಲಿ ಮೂರು ಸಾಲು ಕಲ್ಲಿನ ಕಂಬಗಳನ್ನೂ, ಒಂದು ಸಾಲು ದೇವದಾರಿನ ಕಂಬಗಳನ್ನೂ ಇರಿಸಿದನು.

¶ ಸೊಲೊಮೋನನು ಆಕಾಶದ ಕಡೆಗೆ ಕೈಯೆತ್ತಿ ಯೆಹೋವನ ಯಜ್ಞವೇದಿಯ ಮುಂದೆ ಮೊಣಕಾಲೂರಿ ಯೆಹೋವನನ್ನು ಪ್ರಾರ್ಥಿಸಿದ ನಂತರ ಎದ್ದು ನಿಂತು

ನಾನು ಸಂಧ್ಯಾ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಸ್ತಬ್ಧನಾಗಿ ಕುಳಿತುಕೊಂಡಿದ್ದೆನು. ಆ ಮೇಲೆ ದೇಹದಂಡನೆಮಾಡುವುದನ್ನು ಬಿಟ್ಟು ಹರಿದ ಬಟ್ಟೆಮೇಲಂಗಿಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ ನನ್ನ ದೇವರಾದ ಯೆಹೋವನ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದ್ದೇನೆಂದರೆ:

ಧರ್ಮೋಪದೇಶಕನಾದ ಎಜ್ರನು ಪಾರಾಯಣಕ್ಕಾಗಿ ಮಾಡಲ್ಪಟ್ಟ ಮರದ ಪೀಠದ ಮೇಲೆ ನಿಂತನು. ಅವನ ಬಲಗಡೆಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ ಎಂಬುವರೂ, ಎಡಗಡೆಯಲ್ಲಿ ಪೆದಾಯ, ಮಿಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ಎಂಬುವರೂ ನಿಂತುಕೊಂಡಿದ್ದರು.

¶ ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇಮಿನ ಕಡೆಗೆ ಕದವಿಲ್ಲದೆ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರ ಸಲ್ಲಿಸುತ್ತಿದ್ದನು

¶ ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆಮಾಡಿದನು.