TSK

TSK · 2 ಪೂರ್ವಕಾಲವೃತ್ತಾ 6:20

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿಮ್ಮಲಿರುವ ಪ್ರತಿಯೊಬ್ಬನೂ ಆತನು ದಯಪಾಲಿಸಿದ ಹೊಲದ ಎಲ್ಲಾ ಬೆಳೆಗಳಲ್ಲಿ ಪ್ರಥಮಫಲಗಳನ್ನು ಪುಟ್ಟಿಯಲ್ಲಿಟ್ಟು, ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತರಬೇಕು.

ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನು ಮನಸ್ಸಿಗೆ ತಂದುಕೋ.

ಆದರೆ ಈಗ ನನ್ನ ಹೆಸರಿಗೋಸ್ಕರ ಯೆರೂಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನೂ ಆರಿಸಿಕೊಂಡಿದ್ದೇನೆ’ ಎಂದು ಹೇಳಿದನು.

ಇನ್ನು ಮುಂದೆ ಈ ಸ್ಥಳದಲ್ಲಿ ಪ್ರಾರ್ಥಿಸುವವರನ್ನು ಕಟಾಕ್ಷಿಸಿ ಅವರ ವಿಜ್ಞಾಪನೆಗಳಿಗೆ ಕಿವಿಗೊಡುವೆನು.

ಕೃಪೆಮಾಡಿ ನನ್ನ ಮೊರೆಗೆ ಕಿವಿಗೊಡು, ನನ್ನನ್ನು ಕಟಾಕ್ಷಿಸು, ನಿನ್ನ ಸೇವಕನ ಪ್ರಾರ್ಥನೆಯನ್ನು ಲಾಲಿಸಬೇಕು. ನಾನು ಈಗ ಹಗಲಿರುಳೂ ನಿನ್ನ ಸನ್ನಿಧಿಯಲ್ಲಿ ನಿನ್ನ ಸೇವಕರಾದ ಇಸ್ರಾಯೇಲರಿಗಾಗಿ ಪ್ರಾರ್ಥಿಸುತ್ತಾ ಅವರು ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ಅರಿಕೆ ಮಾಡುತ್ತಾ ಇದ್ದೇನೆ; ನಾನೂ, ನನ್ನ ಪೂರ್ವಿಕರೂ ಆ ಪಾಪಗಳಲ್ಲಿ ಪಾಲುಗಾರರಾಗಿದ್ದೇವೆ.

ನಿನ್ನನ್ನು ಕಾಯುವವನು ಯೆಹೋವನೇ; ನಿನ್ನ ಬಲಗಡೆಯಲ್ಲಿ ನೆರಳಿನಂತೆ ನಿಂತಿರುವಾತನು ಯೆಹೋವನೇ.