ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.
TSK
TSK · 2 ಪೂರ್ವಕಾಲವೃತ್ತಾ 6:27
Treasury of Scripture Knowledge references in ಕನ್ನಡ IRV.
ಇದಲ್ಲದೆ ಮೋಡಗಳ ಮೇಲೆ ಮಂಜಿನ ಭಾರವನ್ನು ಹೇರಿ, ತನ್ನ ಮಿಂಚಿನ ಮೇಘಮಂಡಲವನ್ನು ಹರಡುವನು.
ಯೆಹೋವನು ದಯಾಳುವೂ, ಸತ್ಯಸ್ವರೂಪನೂ ಆಗಿದ್ದಾನೆ; ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡೆಸುವನು.
ದೇವರೇ, ನೀನು ಹೇರಳವಾಗಿ ಮಳೆಸುರಿಸಿ, ಬಾಯ್ದೆರೆದಿದ್ದ ನಿನ್ನ ಸ್ವತ್ತನ್ನು ಶಾಂತಪಡಿಸಿದಿ.
ಯೆಹೋವನೇ, ನಿನ್ನ ಕಟ್ಟಳೆಗಳ ಮಾರ್ಗವನ್ನು ನನಗೆ ಉಪದೇಶಿಸು, ಕಡೆಯವರೆಗೂ ಅದನ್ನೇ ಅನುಸರಿಸಿ ನಡೆಯುವೆನು.
“ಮುಂಗಾರು, ಹಿಂಗಾರು ಅಂತು ಸಕಾಲದ ಮಳೆಯನ್ನು ದಯಪಾಲಿಸಿ, ಸುಗ್ಗಿಯ ಕೆಲವು ವಾರಗಳನ್ನು ನಮಗಾಗಿ ಪ್ರತ್ಯೇಕಪಡಿಸುವ ನಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯಿಡೋಣ” ಎಂದು ಮನದಲ್ಲಿ ಅಂದುಕೊಳ್ಳವುದಿಲ್ಲ.
ಜನಾಂಗಗಳ ವ್ಯರ್ಥವಾದ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವನೇ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು. ನೀನು ಇವುಗಳನ್ನೆಲ್ಲಾ ನಡೆಸುವವನಾಗಿದ್ದೀಯಷ್ಟೆ.
ನಾನು ಅವರನ್ನೂ, ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯು ಆಗುವುದು.
ಯೆಹೋವನು ಹೀಗೆ ಹೇಳುತ್ತಾನೆ, “ಈಗಲಾದರೂ, ನೀವು ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ. ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ.”
ಚೀಯೋನಿನ ಜನರೇ ಹರ್ಷಿಸಿರಿ, ನಿಮ್ಮ ದೇವರಾದ ಯೆಹೋವನಲ್ಲಿ ಉಲ್ಲಾಸಿಸಿರಿ. ಆತನು ತನ್ನ ನೀತಿಯಿಂದ ಮುಂಗಾರು ಮಳೆಯನ್ನು ನಿಮಗೆ ಕೊಡುವನು. ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನಂತೆ ನಿಮಗಾಗಿ ಸುರಿಸುವನು.
ಮಳೆಯಾಗುವಂತೆ ಹಿಂಗಾರಿನಲ್ಲಿ ಯೆಹೋವನನ್ನು ಬೇಡಿಕೊಳ್ಳಿರಿ; ಯೆಹೋವನೇ ಮಿಂಚುಗಳನ್ನು ಉಂಟುಮಾಡುತ್ತಾನೆ, ಮನುಷ್ಯರಿಗೆ ಸಮೃದ್ಧಿಯಾದ ಮಳೆಯನ್ನು ದಯಪಾಲಿಸುತ್ತಾನೆ, ಎಲ್ಲರಿಗೂ ಹೊಲದ ಪೈರನ್ನು ಅನುಗ್ರಹಿಸುತ್ತಾನೆ.
ಎಲೀಯನು ನಮಗೆ ಸಮಾನವಾದ ಸ್ವಭಾವವುಳ್ಳವನಾಗಿದ್ದನು, ಅವನು ಮಳೆ ಬರಬಾರದೆಂದು ಭಕ್ತಿಯಿಂದ ಪ್ರಾರ್ಥಿಸಲು ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ.