TSK

TSK · 2 ಪೂರ್ವಕಾಲವೃತ್ತಾ 6:29

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ತಮ್ಮ ಮೇಲೆ ನ್ಯಾಯ ತೀರ್ಪಿನ ಖಡ್ಗ, ಘೋರವ್ಯಾಧಿ, ಕ್ಷಾಮ ಮೊದಲಾದ ಆಪತ್ತುಗಳು ನಮಗೆ ಬರುವಾಗ, ನಾವು ನಿನ್ನ ನಾಮ ಮಹತ್ತು ಇರುವ ಈ ಆಲಯದ ಮುಂದೆಯೂ, ನಿನ್ನ ಮುಂದೆಯೂ ನಿಂತು, ನಮ್ಮ ಇಕ್ಕಟ್ಟಿನಲ್ಲಿ ನಿನಗೆ ಮೊರೆಯಿಡುವುದಾದರೆ ನೀನು ಕೇಳಿ ರಕ್ಷಿಸುವಿ ಎಂದುಕೊಂಡಿದ್ದೇವೆ.

ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. ಸೆಲಾ

ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.

ನಾನು ಯೆಹೋವನಿಗೆ ಮೊರೆಯಿಡುವೆನು, ಯೆಹೋವನಿಗೆ ಕೂಗಿ ಬಿನ್ನೈಸುವೆನು.

ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.