TSK

TSK · 2 ಪೂರ್ವಕಾಲವೃತ್ತಾ 6:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ನನಗಾಗಿ ಒಂದು ಮನೆಯನ್ನು ಕಟ್ಟುವನು. ನಾನು ಅವನ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.

¶ ತರುವಾಯ ದಾವೀದನು ನೆರೆದ ಸಭೆಯವರಿಗೆಲ್ಲಾ, “ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಲು ಸಮೂಹದವರೆಲ್ಲರೂ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಸ್ತುತಿಸುತ್ತಾ ತಲೆಬಾಗಿ ದೇವರಿಗೂ ಮತ್ತು ಅರಸನಿಗೂ ನಮಸ್ಕರಿಸಿದರು.

ಈಗ ಇಸ್ರಾಯೇಲರ ದೇವರಾದ ಯೆಹೋವನೇ, ನೀನು ನಿನ್ನ ಸೇವಕನಾದ ದಾವೀದನಿಗೆ ನುಡಿದಿದ್ದೆಲ್ಲವೂ ಸ್ಥಿರವಾಗಿರಲಿ.

ಇಸ್ರಾಯೇಲರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಆಮೆನ್. ಆಮೆನ್.

ಭೂರಾಜ್ಯಗಳೇ, ದೇವರಿಗೆ ಗಾಯನಮಾಡಿರಿ; ಕರ್ತನನ್ನು ಸಂಕೀರ್ತಿಸಿರಿ. ಸೆಲಾ

ಯೆಹೋವನೇ, ಪೂರ್ಣಮನಸ್ಸಿನಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳ ಎದುರಿನಲ್ಲಿ ನಿನ್ನನ್ನು ಕೀರ್ತಿಸುವೆನು.

“ಇಸ್ರಾಯೇಲರ ದೇವರಾಗಿರುವ ಕರ್ತನಿಗೆ ಸ್ತೋತ್ರವು; ತನ್ನ ಪ್ರಜೆಯನ್ನು ಸಂಧಿಸಿ ಅವರಿಗೆ ಬಿಡುಗಡೆಯನ್ನುಂಟುಮಾಡಿದ್ದಾನೆ;