¶ ಆನಂತರ ಅರಸನೂ, ಎಲ್ಲಾ ಇಸ್ರಾಯೇಲರೂ ಯೆಹೋವನ ಸನ್ನಿಧಿಯಲ್ಲಿ ಯಜ್ಞಮಾಡಿದರು.
TSK
TSK · 2 ಪೂರ್ವಕಾಲವೃತ್ತಾ 7:5
Treasury of Scripture Knowledge references in ಕನ್ನಡ IRV.
ಆಗ ಸೊಲೊಮೋನನು ದೇವದರ್ಶನ ಗುಡಾರದ ಬಳಿಯಲ್ಲಿ ಯೆಹೋವನ ಮುಂದೆ ಇರುವ ತಾಮ್ರದ ಯಜ್ಞವೇದಿಯ ಬಳಿಗೆ ಹೋಗಿ ಅದರ ಮೇಲೆ ಸಾವಿರ ಸರ್ವಾಂಗಹೋಮಗಳನ್ನು ಸಮರ್ಪಿಸಿದನು.
ಅರಸನಾದ ಸೊಲೊಮೋನನೂ, ಎಲ್ಲಾ ಇಸ್ರಾಯೇಲರೂ ಮಂಜೂಷದ ಮುಂದೆ ಕೂಡಿಬಂದು, ಅಸಂಖ್ಯವಾದ ಕುರಿ, ದನಗಳನ್ನು ಯಜ್ಞವಾಗಿ ಅರ್ಪಿಸಿದರು.
ಸಮೂಹದವರು ಸರ್ವಾಂಗಹೋಮಕ್ಕೋಸ್ಕರ ತಂದೊಪ್ಪಿಸಿದ ಹೋರಿಗಳು ಎಪ್ಪತ್ತು, ಟಗರುಗಳು ನೂರು, ಕುರಿಮರಿಗಳು ಇನ್ನೂರು. ಇವೆಲ್ಲವು ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆಗಾಗಿಯೇ ಮೀಸಲಾದವು.
¶ ಯೋಷೀಯನು ಹಬ್ಬಕ್ಕೆ ಬಂದ ಜನರಿಗೆ ಪಸ್ಕಯಜ್ಞಕ್ಕಾಗಿ ರಾಜಕೀಯ ಸೊತ್ತಿನಿಂದ ಮೂವತ್ತು ಸಾವಿರ ಆಡುಮರಿಗಳನ್ನೂ, ಕುರಿಮರಿಗಳನ್ನೂ, ಮೂರು ಸಾವಿರ ಹೋರಿಗಳನ್ನೂ ದಾನಮಾಡಿದನು.
ಉತ್ಸವಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮ ಪಶು, ಧಾನನೈವೇದ್ಯ ಪಾನನೈವೇದ್ಯ, ಇವುಗಳನ್ನು ಒದಗಿಸುವುದು ಅರಸನ ಕರ್ತವ್ಯವಾಗಿದೆ; ಇಸ್ರಾಯೇಲ್ ವಂಶದ ದೋಷ ನಿವಾರಣೆಗಾಗಿ ಅವನು ದೋಷಪರಿಹಾರಕ ಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮ ಪಶು, ಸಮಾಧಾನ ಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.
¶ ಆನಂತರ ಯೆರೂಸಲೇಮಿನಲ್ಲಿ ದೇವಾಲಯದ ಪ್ರತಿಷ್ಠೆಯ ಹಬ್ಬವು ನಡೆಯಿತು. ಅದು ಚಳಿಗಾಲವಾಗಿತ್ತು.