¶ ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.
TSK
TSK · 2 ಪೂರ್ವಕಾಲವೃತ್ತಾ 7:8
Treasury of Scripture Knowledge references in ಕನ್ನಡ IRV.
¶ “‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೀವು ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಯೆಹೋವನಿಗೆ ಉತ್ಸವವನ್ನು ಆಚರಿಸಬೇಕು.
¶ ನೀವು ಕಣದ ಕೆಲಸವನ್ನೂ, ದ್ರಾಕ್ಷಿ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ ಏಳು ದಿನಗಳವರೆಗೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸಬೇಕು.
ಸೊಲೊಮೋನನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜ್ಯಗಳವರನ್ನು ಆಳುತ್ತಿದ್ದನು. ಅವರು ಅವನ ಜೀವಮಾನದಲ್ಲೆಲ್ಲಾ ಅವನಿಗೆ ಅಧೀನರಾಗಿ ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು.
ಈ ರೀತಿಯಾಗಿ ಸೊಲೊಮೋನನು ಹಮಾತ್ ಪಟ್ಟಣದ ದಾರಿಯಿಂದ ಐಗುಪ್ತದ ಹಳ್ಳದ ವರೆಗಿರುವ ಪ್ರಾಂತ್ಯಗಳಿಂದ ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲರೂ ಎರಡು ವಾರ ಅಂದರೆ ಹದಿನಾಲ್ಕು ದಿನಗಳ ವರೆಗೆ ತಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಹಬ್ಬಮಾಡಿದರು.
ಹೀಗೆ, ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿ ಸೇರಿಬಂದರು; ಆ ಜನಸಮೂಹವು ಮಹಾಸಮೂಹವಾಗಿತ್ತು.
ಸೇನಾಧೀಶ್ವರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರ ವಂಶದವರೇ, ಇಗೋ, ನಾನು ನಿಮಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು; ಅವರು ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಹೊಳೆಯ ತನಕ, ನಿಮ್ಮನ್ನು ಹಿಂಸಿಸುವರು.”
ಆಗ ಯೆಹೂದ್ಯರ ಗುಡಾರಗಳ ಹಬ್ಬವು ಸಮೀಪವಾಗಿತ್ತು,