ವಿಮೋಚನಕಾಂಡ 29:38
TSK
¶ ಯಜ್ಞವೇದಿಯ ಮೇಲೆ ನಿತ್ಯವೂ ಸಮರ್ಪಿಸಬೇಕಾದವುಗಳು, ಒಂದು ವರ್ಷದ ಎರಡು ಕುರಿಮರಿಗಳನ್ನು ಪ್ರತಿದಿನವೂ ಹೋಮಮಾಡಬೇಕು.
TSK
Treasury of Scripture Knowledge references in ಕನ್ನಡ IRV.
¶ ಯಜ್ಞವೇದಿಯ ಮೇಲೆ ನಿತ್ಯವೂ ಸಮರ್ಪಿಸಬೇಕಾದವುಗಳು, ಒಂದು ವರ್ಷದ ಎರಡು ಕುರಿಮರಿಗಳನ್ನು ಪ್ರತಿದಿನವೂ ಹೋಮಮಾಡಬೇಕು.
¶ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
ಸೊಲೊಮೋನನು ಯೆಹೋವನ ಆಲಯದ ಮುಂದೆ ತಾನು ಯೆಹೋವನಿಗೋಸ್ಕರ ಕಟ್ಟಿಸಿದ ಯಜ್ಞವೇದಿಯ ಮೇಲೆ ವರ್ಷಕ್ಕೆ ಮೂರು ಸಾರಿ ಸರ್ವಾಂಗಹೋಮ, ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸಿ ಧೂಪಹಾಕುತ್ತಿದ್ದನು. ಹೀಗೆ ಅವನು ದೇವಾಲಯವನ್ನು ಕಟ್ಟಿ ಸಂಪೂರ್ಣಗೊಳಿಸಿದನು.
ಉತ್ಸವಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮ ಪಶು, ಧಾನನೈವೇದ್ಯ ಪಾನನೈವೇದ್ಯ, ಇವುಗಳನ್ನು ಒದಗಿಸುವುದು ಅರಸನ ಕರ್ತವ್ಯವಾಗಿದೆ; ಇಸ್ರಾಯೇಲ್ ವಂಶದ ದೋಷ ನಿವಾರಣೆಗಾಗಿ ಅವನು ದೋಷಪರಿಹಾರಕ ಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮ ಪಶು, ಸಮಾಧಾನ ಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.