TSK

TSK · 2 ಪೂರ್ವಕಾಲವೃತ್ತಾ 8:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ದೇವಪುರುಷನಾದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಾಯೇಲರ ವಿಷಯವಾಗಿ ಹೇಳಿದ ಆಶೀರ್ವಾದವು:

¶ ಆಗ ಯೆಹೂದ ದೇಶದವನಾದ ಒಬ್ಬ ದೇವರ ಮನುಷ್ಯನು ಯೆಹೋವನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಹಾಕುವುದಕ್ಕಾಗಿ ಯಜ್ಞವೇದಿಯ ಹತ್ತಿರ ನಿಂತುಕೊಂಡಿದ್ದನು

¶ ದ್ವಾರಪಾಲಕರಲ್ಲಿ ಶಲ್ಲೂಮ್, ಅಕ್ಕೂಬ್, ಟಲ್ಮೋನ್, ಅಹೀಮಾನ್, ಇವರೂ ಮತ್ತು ಇವರ ಸಹೋದರರು. ಇವರಲ್ಲಿ ಶಲ್ಲೂಮನು ಪ್ರಮುಖನಾಗಿದ್ದನು.

¶ ಆಗ ದಾವೀದನು ಲೇವಿಯರ ಪ್ರಧಾನರಿಗೆ, “ಗಾಯಕರಾದ ನಿಮ್ಮ ಸಹೋದರರನ್ನು ಸ್ವರಮಂಡಲ, ಕಿನ್ನರಿ, ತಾಳ ಮೊದಲಾದ ವಾದ್ಯಗಳಿಂದ ಉತ್ಸಾಹಧ್ವನಿ ಮಾಡುವುದಕ್ಕಾಗಿ ನೇಮಿಸಿರಿ” ಎಂದು ಆಜ್ಞಾಪಿಸಿದನು.

ಹೇಮಾನ್ ಮತ್ತು ಯೆದುತೂನರ ಹತ್ತಿರ ವಾದ್ಯಗಾರರಿಗಾಗಿ ತುತ್ತೂರಿ, ತಾಳ ಮೊದಲಾದ ವಾದ್ಯಗಳೂ ಮತ್ತು ದೇವಕೀರ್ತನಾ ಸಾಹಿತ್ಯಗಳಿದ್ದವು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿ ನೇಮಿಸಲ್ಪಟ್ಟರು.

¶ ಇದಲ್ಲದೆ ದಾವೀದನು ಲೇವಿಯ ಸಂತಾನದವರಾದ ಗೇರ್ಷೋನ್ಯರು, ಕೆಹಾತ್ಯರು ಮತ್ತು ಮೆರಾರೀಯರು ಇವರನ್ನು ವಿವಿಧ ವರ್ಗಗಳನ್ನಾಗಿ ವಿಭಾಗಿಸಿದನು.

ದಾವೀದನು ಎಲ್ಲಾಜಾರನ ಸಂತಾನದವನಾದ ಚಾದೋಕನೂ, ಈತಾಮಾರನ ಸಂತಾನದವನಾದ ಅಹೀಮೆಲೆಕನು ಯಾಜಕರನ್ನು ಸರದಿಯ ಮೇಲೆ ಸೇವೆಮಾಡತಕ್ಕ ವರ್ಗಗಳನ್ನಾಗಿ ವಿಭಾಗಿಸಿದರು.

¶ ದೇವಾಲಯದ ದ್ವಾರಪಾಲಕ ವರ್ಗಗಳ ವಿಷಯ: ಕೋರಹೀಯನಾದ ಮೆಷೆಲೆಮ್ಯ ಎಂಬವನು, ಕೊರೇಯನ ಮಗ ಹಾಗೂ ಆಸಾಫನ ಮೊಮ್ಮಗ.

ಮಹಾ ಪರಿಶುದ್ಧ ಸ್ಥಳದಿಂದ ಯಾಜಕರು ಹೊರಗೆ ಬಂದರು. ಸಮಸ್ತ ಯಾಜಕರು ವರ್ಗವ್ಯತ್ಯಾಸವಿಲ್ಲದೆ ಎಲ್ಲರೂ ತಮ್ಮನ್ನು ಶುದ್ಧಮಾಡಿಕೊಂಡಿದ್ದರು.

ಯಾವ ವಿಷಯದಲ್ಲಾದರೂ ಅಶುದ್ಧನಾದವನು ಯೆಹೋವನ ಆಲಯವನ್ನು ಪ್ರವೇಶಿಸದಂತೆ ಯೆಹೋಯಾದನು ಆಯಾ ಬಾಗಿಲುಗಳಲ್ಲಿ ದ್ವಾರಪಾಲಕರನ್ನಿರಿಸಿದನು.

¶ ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ಸರ್ವಾಂಗಹೋಮ, ಸಮಾಧಾನ ಯಜ್ಞ, ಇವುಗಳನ್ನು ಸಮರ್ಪಿಸುವುದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ, ಕೀರ್ತಿಸುತ್ತಾ, ಕೃತಜ್ಞತಾಸ್ತುತಿಮಾಡುತ್ತಾ ಇರುವುದಕ್ಕೂ ನೇಮಿಸಿದನು.

ಆಸಾಫ್ಯರಾದ ಗಾಯಕರು, ಅರಸನಾದ ದಾವೀದನ ಮತ್ತು ಆಸಾಫ್, ಹೇಮಾನ್, ಅರಸನ ದರ್ಶಿಯಾದ ಯೆದುತೂನ್ ಇವರ ಆಜ್ಞಾನುಸಾರವಾಗಿ ತಮ್ಮ ಸ್ಥಳದಲ್ಲಿ ನಿಂತಿದ್ದರು; ದ್ವಾರಪಾಲಕರು ಆಯಾ ಬಾಗಿಲುಗಳನ್ನು ಕಾಯುತ್ತಿದ್ದರು. ಅವರ ಸಹೋದರರಾದ ಲೇವಿಯರು ಅವರ ಭೋಜನಕ್ಕೆ ಸಿದ್ಧಮಾಡುತ್ತಿದ್ದದರಿಂದ ಅವರು ತಮ್ಮ ತಮ್ಮ ಸೇವೆಯನ್ನು ಬಿಡುವುದಕ್ಕೆ ಕಾರಣವಿರಲಿಲ್ಲ.

ಈ ಲೇವಿಯರ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಅದ ಯೋಯಾಕೀಮ್, ದೇಶಾಧಿಪತಿಯಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನಾದ ಎಜ್ರ ಇವರ ಕಾಲದಲ್ಲಿದ್ದವರು:

ದೇವರ ಮನುಷ್ಯನಾದ ದಾವೀದನ ವಾದ್ಯಗಳನ್ನು ಹಿಡಿದಿರುವ ಇವನ ಬಂಧುಗಳಾದ ಶೆಮಾಯ, ಅಜರೇಲ್, ಮಿಲಲೈ, ಗಿಲಲೈ, ಮಾಯೈ, ನೆತನೇಲ್, ಯೆಹೂದ, ಹಾನಾನೀ ಎಂಬುವರೂ ಹೋದರು, ಧರ್ಮೋಪದೇಶಕನಾದ ಎಜ್ರನು ಇವರ ಮುಂದಾಳಾಗಿ ಹೊರಟನು.

¶ ಒಂದು ದಿನ ಜಕರೀಯನ ವರ್ಗದ ಸರದಿ ಬಂದಾಗ ಅವನು ದೇವರ ಸನ್ನಿಧಿಯಲ್ಲಿ ಯಾಜಕಧರ್ಮವನ್ನು ನಡೆಸುತ್ತಿದ್ದನು.

¶ “ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದ ನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು.