¶ ಅದಕ್ಕೆ ಮೋಶೆಯು ಬಹಳ ಕೋಪಗೊಂಡು ಯೆಹೋವನಿಗೆ, “ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ” ಎಂದು ಮನವಿಮಾಡಿದನು.
TSK
TSK · 2 ಕೊರಿಂಥದವರಿಗೆ 7:2
Treasury of Scripture Knowledge references in ಕನ್ನಡ IRV.
‹ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನೂ ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.›
‹ಮತ್ತು ನೀವು ಯಾವ ಊರಿಗಾದರೂ ಹೋದ ಮೇಲೆ ಆ ಊರಿನ ಜನರು ನಿಮ್ಮನ್ನು ಸೇರಿಸಿಕೊಂಡರೆ ಅವರು ನಿಮಗೆ ಬಡಿಸಿದ್ದನ್ನು ಊಟಮಾಡಿರಿ.›
ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.
ನಮ್ಮಲ್ಲಿ ಸಂಕುಚಿತ ಭಾವನೆಯೇನೂ ಇಲ್ಲ. ಇದು ಇರುವುದಾದರೆ ನಿಮ್ಮಲ್ಲೇ.
¶ ಯಾರೂ ನನ್ನನ್ನು ಬುದ್ಧಿಹೀನನೆಂದು ತಿಳಿಯಬಾರದೆಂದು ತಿರುಗಿ ಹೇಳುತ್ತೇನೆ. ಹಾಗೆ ನೆನಸಿದರೂ ಚಿಂತೆಯಿಲ್ಲ. ನನ್ನನ್ನು ಬುದ್ಧಿಹೀನನಾಗಿಯೇ ಸ್ವೀಕರಿಸಿ. ಆಗ ನಾನು ಆತ್ಮ ಪ್ರಶಂಸೆ ಮಾಡಿಕೊಳ್ಳಲು ಅಲ್ಪಸ್ವಲ್ಪವಾದರೂ ಆಸ್ಪದವಾಗುತ್ತದೆ.
ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕೊರತೆಯಾದದ್ದನ್ನು ತುಂಬುವುದಕ್ಕಾಗಿ ಅವನು ಜೀವದ ಆಸೆಯನ್ನು ತೊರೆದು ಕ್ರಿಸ್ತನ ಸೇವೆಯ ನಿಮಿತ್ತ ಸಾಯುವ ಸ್ಥಿತಿಯಲ್ಲಿದುದ್ದರಿಂದ ನೀವು ಅವನನ್ನು ಪೂರ್ಣ ಸಂತೋಷದಿಂದ ಕರ್ತನ ಹೆಸರಿನಲ್ಲಿ ಸೇರಿಸಿಕೊಳ್ಳಿರಿ. ಅಂಥವರನ್ನು ಮಾನ್ಯರೆಂದೆಣಿಸಿರಿ.
ಯಾಕೆಂದರೆ ನಮ್ಮ ಬೋಧನೆಯು ತಪ್ಪಾದದ್ದಲ್ಲ, ಅಶುದ್ಧವಾದದ್ದೂ ಅಲ್ಲ, ಮೋಸವೂ ಅಲ್ಲ.
ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂಬುದನ್ನು ನೀವೇ ಬಲ್ಲಿರಿ, ನಾವು ನಿಮ್ಮಲ್ಲಿ ಸೋಮಾರಿಯಾಗಿ ನಡೆಯಲಿಲ್ಲ.
ನೀನು ನನ್ನನ್ನು ಜೊತೆಗಾರನೆಂದು ಭಾವಿಸುವುದಾದರೆ ನನ್ನನ್ನು ಸೇರಿಸಿಕೊಳ್ಳುವ ಪ್ರಕಾರವೇ ಅವನನ್ನು ಸೇರಿಸಿಕೋ.
ಆದುದರಿಂದ, ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ, ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ.