ನಾನು ಅವನ ಸಂಗಡ ಗುಪ್ತವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರುದ್ಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?” ಎಂದನು.
TSK
TSK · 2 ಯೋಹಾನನು 1:12
Treasury of Scripture Knowledge references in ಕನ್ನಡ IRV.
¶ ‹“ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಉಂಟು, ಆದರೆ ನೀವು ಈಗ ಅವುಗಳನ್ನು ಗ್ರಹಿಸಲು ನಿಮ್ಮಲ್ಲಿ ಸಾಮರ್ಥ್ಯವಿಲ್ಲ.›
¶ ‹“ಆದರೆ ಈಗ ನಾನು ನಿನ್ನ ಬಳಿಗೆ ಬರುತ್ತೇನೆ. ಆದುದರಿಂದ›‹ನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರುವಂತೆ ನಾನು ಲೋಕದಲ್ಲಿದ್ದು ಈ ಮಾತುಗಳನ್ನಾಡುತ್ತಿದೇನೆ.›
ನಾನು ಹಾದುಹೋಗಬೇಕೆಂದಿರುವ ಮಕೆದೋನ್ಯ ಸೀಮೆಯನ್ನು ದಾಟುವಾಗ ನಿಮ್ಮ ಬಳಿಗೆ ಬಂದು ಬಹುಶಃ ನಿಮ್ಮ ಬಳಿಯಲ್ಲೇ ಉಳಿದುಕೊಳ್ಳುವೆನು.
¶ ಇದಲ್ಲದೆ ದೇವರು ನಿಮ್ಮ ಪ್ರಾರ್ಥನೆಗಳನ್ನು ಕೇಳಿ ನಾನು ನಿಮ್ಮ ಬಳಿಗೆ ಬರುವುದಕ್ಕೆ ಕೃಪೆ ಮಾಡುವನೆಂಬ ನಿರೀಕ್ಷೆ ನನಗುಂಟು. ಆದಕಾರಣ ನಾನು ಉಳಿದುಕೊಳ್ಳಲು ಒಂದು ಕೊಠಡಿಯನ್ನು ಸಿದ್ಧಪಡಿಸು.
¶ ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬುದು ನಿಮಗೆ ತಿಳಿದಿರಲಿ. ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.
¶ ನಾನು ನಿನಗೆ ಬರೆಯಬೇಕಾದ ಅನೇಕ ವಿಷಯಗಳಿವೆ, ಆದರೆ ಮಸಿಯಿಂದ ಕಾಗದದ ಮೇಲೆ ಬರೆಯುವುದಕ್ಕೆ ನನಗಿಷ್ಟವಿಲ್ಲ.