TSK

TSK · 2 ಅರಸುಗಳು 13:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನು ಯೇಹುವಿಗೆ, “ನೀನು ನನ್ನ ದೃಷ್ಟಿಗೆ ಹಿತಕರವಾದದ್ದನ್ನು ನಡಿಸಿ ನನ್ನ ಮೆಚ್ಚಿಕೆಯನ್ನು ಪಡೆದಿರುವೆ. ಅಹಾಬನ ಮನೆಯವರನ್ನು ಕುರಿತು ನನ್ನ ಚಿತ್ತವನ್ನು ನೆರವೇರಿಸಿದ್ದೀ. ಆದುದರಿಂದ ನಿನ್ನ ಸಂತಾನದವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು” ಎಂದು ಹೇಳಿದನು.

¶ ಏಳನೆಯ ವರ್ಷದಲ್ಲಿ, ಯೆಹೋಯಾದಾವನು ಕಾರಿಯರ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಯೆಹೋವನ ಆಲಯಕ್ಕೆ ಕರೆಯಿಸಿದನು. ಅಲ್ಲಿ ಅವನು ಅವರ ಸಂಗಡ ಆಪ್ತನಾಗಿದ್ದು ಪ್ರಮಾಣಪೂರ್ವಕವಾದ ಒಡಂಬಡಿಕೆಯನ್ನು ಮಾಡಿಕೊಂಡ ನಂತರ ರಾಜಕುಮಾರನನ್ನು ತೋರಿಸಿದನು.

¶ ಯೆಹೋವಾಷನು ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅರಸನಾಗಿ, ಯೆರೂಸಲೇಮಿನಲ್ಲಿ ನಲ್ವತ್ತು ವರ್ಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಇವನ ತಾಯಿ.

“ನಿನ್ನ ಸಂತಾನದವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು” ಎಂಬುದಾಗಿ ಯೆಹೋವನು ಯೇಹುವಿಗೆ ಮುಂತಿಳಿಸಿದ ಮಾತು ನೆರವೇರಿತು.