TSK

TSK · 2 ಅರಸುಗಳು 13:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯಾರೊಬ್ಬಾಮನ ಇತರ ಕೃತ್ಯಗಳೂ ಅವನ ಯುದ್ಧ ಮತ್ತು ರಾಜ್ಯಭಾರಗಳ ವಿವರವೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.

¶ ಆ ಕಾಲದಲ್ಲಿ ಎಲೀಷನು ಮರಣಕರವಾದ ರೋಗಕ್ಕೆ ಗುರಿಯಾದನು. ಇಸ್ರಾಯೇಲರ ಅರಸನಾದ ಯೋವಾಷನು ಇದನ್ನು ಕೇಳಿ ಅವನ ಬಳಿಗೆ ಹೋಗಿ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲರಿಗೆ ರಥರಥಾಶ್ವಬಲಗಳಾಗಿದ್ದವನೇ” ಎಂದು ಕೂಗುತ್ತಾ ಅವನ ಮುಖದ ಮೇಲೆ ಬಿದ್ದು ಬಹಳವಾಗಿ ಅತ್ತನು.

¶ ಅಮಚ್ಯನು ಇದನ್ನು ಗಮನಕ್ಕೆ ತೆಗೆದುಕೊಳ್ಳದೆ ಇದ್ದುದರಿಂದ ಇಸ್ರಾಯೇಲರ ಅರಸನಾದ ಯೆಹೋವಾಷನು ಯುದ್ಧಕ್ಕೆ ಹೊರಟನು. ಅವರು ಯೆಹೂದ ಪ್ರಾಂತ್ಯದ ಬೇತ್ಷೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು.

ಯೆಹೋವಾಷನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದೊಳಗೆ ಇಸ್ರಾಯೇಲರ ರಾಜಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯಾರೊಬ್ಬಾಮನು ಅರಸನಾದನು.

¶ ಅನಂತರ ಯೆಹೂದದ ಅರಸನಾದ ಅಮಚ್ಯನು ಸಮಾಲೋಚನೆ ನಡೆಸಿ, ಯೇಹುವಿನ ಮೊಮ್ಮಗನೂ, ಯೆಹೋವಾಹಾಜನ ಮಗನೂ, ಇಸ್ರಾಯೇಲರ ಅರಸನೂ ಆದ ಯೋವಾಷನಿಗೆ, “ನಾವು ಒಬ್ಬರನ್ನೊಬ್ಬರು ಎದುರುಗೊಳ್ಳೋಣ” ಎಂದು ದೂತರ ಮುಖಾಂತರವಾಗಿ ಹೇಳಿ ಕಳುಹಿಸಿದನು.