ಇಸ್ರಾಯೇಲರಿಗೆ ಕೇಡು ಬಂದಿತು. ತಾವು ಇಕ್ಕಟ್ಟಿನಲ್ಲಿದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.
TSK
TSK · 2 ಅರಸುಗಳು 13:7
Treasury of Scripture Knowledge references in ಕನ್ನಡ IRV.
ಇಬ್ರಿಯರು ಈಟಿಕತ್ತಿಗಳನ್ನು ಮಾಡಿಕೊಳ್ಳಬಾರದೆಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ ಇಸ್ರಾಯೇಲ್ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ.
ಇಸ್ರಾಯೇಲರು ಸಹ ಆಹಾರ ಸಾಮಗ್ರಿಗಳನ್ನು ಸಿದ್ಧಪಡಿಸಿಕೊಂಡು ಅವರಿಗೆ ವಿರುದ್ಧವಾಗಿ ಬಂದರು. ಅರಾಮ್ಯರು ದೇಶದಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರು. ಆಡುಮರಿಗಳ ಎರಡು ಹಿಂಡುಗಳಂತಿರುವ ಇಸ್ರಾಯೇಲರು ಅವರ ಎದುರಿನಲ್ಲಿ ಪಾಳೆಯ ಮಾಡಿಕೊಂಡರು.
¶ ಯೆಹೋವನು ಆ ಕಾಲದಲ್ಲಿ ಇಸ್ರಾಯೇಲರನ್ನು ಕುಗ್ಗಿಸತೊಡಗಿದನು. ಹಜಾಯೇಲನು ಬಂದು ಇಸ್ರಾಯೇಲರನ್ನು ಇಸ್ರಾಯೇಲರ ಮೇರೆಗಳಲ್ಲಿ ಸೋಲಿಸಿದನು.
¶ “ಆದುದರಿಂದ ಈಗ ನನ್ನ ಒಡೆಯನಾದ ಅಶ್ಶೂರದ ಅರಸನಿಗೆ ಸವಾಲು ಹಾಕುವುದಕ್ಕೆ ನಿನಗೆ ಮನಸ್ಸುಂಟೋ? ಹಾಗಾದರೆ ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ. ನೀನು ಅಷ್ಟು ಮಂದಿ ಸವಾರರನ್ನು ಅವುಗಳ ಮೇಲೆ ಕುಳ್ಳಿರಿಸುವಿಯೋ?
“ಇಗೋ, ನಾನು ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ, ನೀನು ಬೆಟ್ಟಗಳನ್ನು ಒಡೆದು ಪುಡಿಪುಡಿಮಾಡಿ ಗುಡ್ಡಗಳನ್ನು ಹೊಟ್ಟು ಮಾಡುವಿ.
ಯೆಹೋವನು ಇಂತೆನ್ನುತ್ತಾನೆ, “ದಮಸ್ಕವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಗಿಲ್ಯಾದನ್ನು ಕಬ್ಬಿಣದ ಹಂತಿ ಕುಂಟೆಗಳಿಂದ ಒಕ್ಕಿ ನುಗ್ಗುಮಾಡಿತಷ್ಟೆ.