¶ “ಆತನು ತನ್ನ ಜನರನ್ನು ಪ್ರೀತಿಸುತ್ತಾನೆ. ಯೆಹೋವನೇ, ನಿನ್ನ ಪರಿಶುದ್ಧ ಜನರು ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣಸನ್ನಿಧಾನದಲ್ಲಿ ಕುಳಿತಿರುವರು; ನೀನು ಹೇಳುವ ಆಜ್ಞೆಗಳನ್ನು ತಪ್ಪದೆ ಪಾಲಿಸಿದರು.
TSK
TSK · 2 ಅರಸುಗಳು 2:3
Treasury of Scripture Knowledge references in ಕನ್ನಡ IRV.
ಅವನು ದೇವಗಿರಿಗೆ ಬಂದ ಕೂಡಲೆ ಪರವಶವಾದ ಪ್ರವಾದಿಸಮೂಹವು ತನ್ನೆದುರಿಗೆ ಬರುವುದನ್ನು ಕಂಡನು. ದೇವರ ಆತ್ಮವು ಸೌಲನ ಮೇಲೆ ಬಂದ್ದದರಿಂದ ಅವನೂ ಪರವಶನಾಗಿ ಅವರೊಂದಿಗೆ ಸೇರಿ ಪ್ರವಾದಿಸಿದನು.
ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹು ಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರು ಜನರು ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.
¶ ಯೆರಿಕೋವಿನಲ್ಲಿದ್ದ ಪ್ರವಾದಿ ಮಂಡಳಿಯವರು ಎಲೀಷನನ್ನು ಎದುರುಗೊಂಡು ಅವನಿಗೆ, “ಯೆಹೋವನು ಈ ಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವನೆಂಬುದು ನಿನಗೆ ಗೊತ್ತುಂಟೋ?” ಎಂದು ಕೇಳಿದರು. ಅದಕ್ಕೆ ಅವನು, ನನಗೆ “ಗೊತ್ತುಂಟು ನೀವು ಸುಮ್ಮನಿರಿ” ಎಂದು ಉತ್ತರ ಕೊಟ್ಟನು.
ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಳಿಯವರು ಇದನ್ನು ಕಂಡು, “ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿದೆ” ಎಂದು ತಿಳಿದುಕೊಂಡು ಅವನನ್ನು ಎದುರುಗೊಂಡು, ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.
¶ ಎಲೀಷನು ತಿರುಗಿ ಗಿಲ್ಗಾಲಿಗೆ ಹೋದನು. ಆಗ ದೇಶದಲ್ಲಿ ಬರವಿದ್ದಿತು. ಪ್ರವಾದಿಮಂಡಳಿಯವರು ತನ್ನ ಮುಂದೆ ಒಟ್ಟಿಗೆ ಸೇರಿ ಬರಲು ಅವನು ತನ್ನ ಸೇವಕನಿಗೆ, “ದೊಡ್ಡ ಪಾತ್ರೆಯನ್ನು ತೆಗೆದುಕೊಂಡು ಇವರಿಗೋಸ್ಕರ ಅಡಿಗೆ ಮಾಡು” ಎಂದು ಆಜ್ಞಾಪಿಸಿದನು.
¶ ಒಂದು ದಿನ ಪ್ರವಾದಿಮಂಡಳಿಯವರು ಎಲೀಷನಿಗೆ, “ನಾವು ನಿನ್ನ ಜೊತೆಯಲ್ಲಿ ವಾಸಿಸುತ್ತಿರುವ ಈ ಸ್ಥಳವು ಬಹಳ ಇಕ್ಕಟ್ಟಾಗಿದೆ.
ಆಹಾ, ನಾನೂ, ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರನಾದ ಯೆಹೋವನಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲರ ಮಧ್ಯದಲ್ಲಿದ್ದೇವೆ.
¶ “ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ, ನಮ್ಮ ಪೂರ್ವಿಕರ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಣವನ್ನು ಪಡೆದವನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ, ನಾನೂ ಅಭಿಮಾನಿಯಾಗಿದ್ದೆನು.