ಅಲ್ಲಿಂದ ಫಿಲಿಷ್ಟಿಯರ ದಂಡು ಇರುವ ದೇವಗಿರಿಯನ್ನು ಮುಟ್ಟಿದಾಗ ಮುಂಭಾಗದಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದ ಇಳಿದು ಬರುತ್ತಿರುವ ಪ್ರವಾದಿಗಳ ಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು.
TSK
TSK · 2 ಅರಸುಗಳು 2:7
Treasury of Scripture Knowledge references in ಕನ್ನಡ IRV.
ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾಮಿಯಾದ ನಿನಗೆ ಗೊತ್ತಾಗಲಿಲ್ಲವೋ? ಅವರಲ್ಲಿ ನೂರು ಜನರನ್ನು ತೆಗೆದುಕೊಂಡು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅನ್ನ ಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ.
¶ ಆದರೆ ಅವರು ಅವನನ್ನು ಒತ್ತಾಯಪಡಿಸಿದ್ದರಿಂದ ಅವನು ಬೇಸರಗೊಂಡು, “ಅವರನ್ನು ಕಳುಹಿಸಿರಿ” ಎಂದು ಅಪ್ಪಣೆ ಕೊಟ್ಟನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿನ ಹುಡುಕಿದರೂ ಎಲೀಯನನ್ನು ಕಾಣಲಿಲ್ಲ.
ಅದಕ್ಕೆ ಗೇಹಜಿಯು, “ಕ್ಷೇಮ, ಎಫ್ರಾಯೀಮ್ ಪರ್ವತ ಪ್ರದೇಶದಿಂದ ಪ್ರವಾದಿಮಂಡಳಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಆದುದರಿಂದ ಅವರಿಗೋಸ್ಕರ ಬೇಗನೇ ಒಂದು ತಲಾಂತು ಬೆಳ್ಳಿಯನ್ನೂ, ಎರಡು ಜೋಡಿ ಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂದು ನನ್ನ ಯಜಮಾನನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು” ಎಂದು ಉತ್ತರ ಕೊಟ್ಟನು.
¶ ಪ್ರವಾದಿಯಾದ ಎಲೀಷನು ಪ್ರವಾದಿಮಂಡಳಿಯವರಲ್ಲಿ ಒಬ್ಬನನ್ನು ಕರೆದು ಅವನಿಗೆ, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.”