TSK

TSK · 2 ಅರಸುಗಳು 20:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅನಂತರ ದಾವೀದನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು.

ರೆಹಬ್ಬಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ಅವನ ಹಿರಿಯರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ. ಅನಂತರ ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಅರಸನಾದನು.

ಮನಸ್ಸೆಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅವನಿಗೆ ನಂತರ ಅವನ ಮಗನಾದ ಆಮೋನನು ಅರಸನಾದನು.

ಉಜ್ಜೀಯನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಕುಷ್ಠ ರೋಗಿಯದೆಂದು ಬಗೆದು, ರಾಜ ಕುಟುಂಬದ ಸ್ಮಶಾನವಿದ್ದ ಹೊಲದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.