TSK

TSK · 2 ಅರಸುಗಳು 21:24

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲಿಯೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆ ಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು.

ಯಾರೊಬ್ಬಾಮನು ಹಿಂತಿರುಗಿ ಬಂದಿದ್ದಾನೆಂಬ ವರ್ತಮಾನವು ಇಸ್ರಾಯೇಲರಿಗೆ ತಿಳಿದಾಗ ಅವರೆಲ್ಲರೂ ಅವನನ್ನು ನೆರೆದ ಸಭೆಯ ಮುಂದೆ ಕರೆಯಿಸಿ ತಮ್ಮ ಅರಸನನ್ನಾಗಿ ನೇಮಿಸಿಕೊಂಡರು. ದಾವೀದನ ಕುಟುಂಬದವರನ್ನು ಯೆಹೂದ ಕುಲವೇ ಹೊರತು ಬೇರೆ ಯಾವ ಕುಲವೂ ಹಿಂಬಾಲಿಸಲಿಲ್ಲ.

ಅವನು ರಾಜ್ಯವನ್ನು ಭದ್ರಪಡಿಸಿಕೊಂಡ ಕೂಡಲೇ ತನ್ನ ತಂದೆಯನ್ನು ಕೊಂದ ಸೇವಕರಿಗೆ ಮರಣದಂಡನೆ ವಿಧಿಸಿದನು.

¶ ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂವತ್ತೊಂದು ವರ್ಷ ಆಳಿದನು. ಬೊಚ್ಕತೂರಿನವಳೂ ಅದಾಯನ ಮಗಳೂ ಆದ ಯೆದೀದಾ ಎಂಬಾಕೆಯು ಅವನ ತಾಯಿ.

¶ ಆನಂತರ ಎಲ್ಲಾ ಯೆಹೂದ್ಯರು ಅಮಚ್ಯನ ಮಗನಾದ ಉಜ್ಜೀಯನನ್ನು ಅರಸನ್ನನ್ನಾಗಿ ಮಾಡಿದರು. ಉಜ್ಜೀಯನು ಅರಸನಾದಾಗ ಹದಿನಾರು ವರ್ಷದವನಾಗಿದ್ದ.