TSK

TSK · 2 ಅರಸುಗಳು 21:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆತನಿಂದ ದೂರಹೋಗಿ ಅನ್ಯದೇವರುಗಳನ್ನು ಪೂಜಿಸಬಾರದೆಂದು ಮತ್ತು ಆತನು ನಿಷೇಧಿಸಿರುವ ಸೂರ್ಯ, ಚಂದ್ರ ಅಥವಾ ನಕ್ಷತ್ರಮಂಡಲವನ್ನಾಗಲಿ ಸೇವಿಸಿ, ಪೂಜಿಸಿ ಯೆಹೋವನ ದೃಷ್ಟಿಯಲ್ಲಿ ಅಸಹ್ಯವಾದದ್ದನ್ನು ನಡಿಸಿದರೆ,

¶ ಎಲೀಯನು ಎಲ್ಲಾ ಜನರ ಹತ್ತಿರ ಹೋಗಿ ಅವರಿಗೆ, “ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ. ಯೆಹೋವನು ದೇವರಾಗಿದ್ದರೆ ಆತನನ್ನೇ ಹಿಂಬಾಲಿಸಿರಿ ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ” ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವುದನ್ನು ಕಂಡನು.

ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

¶ ತರುವಾಯ ಅವನು ಎಲ್ಲಾ ಜನರನ್ನು ಒಟ್ಟಿಗೆ ಸೇರಿಸಿ ಅವರಿಗೆ, “ಅಹಾಬನು ಬಾಳ್ ದೇವತೆಯನ್ನು ಸ್ವಲ್ಪ ಮಾತ್ರ ಆರಾಧಿಸಿದನು. ಯೇಹುವಾದರೂ ಇನ್ನೂ ಅಧಿಕವಾಗಿ ಸೇವಿಸಬೇಕೆಂದಿದ್ದಾನೆ.

ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವನಮೂರ್ತಿಗಳು, ಅಶೇರ ವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು. ಆಕಾಶಸೈನ್ಯ, ಬಾಳ್ ದೇವತೆ ಇವುಗಳನ್ನು ಪೂಜಿಸಿದರು.

ಒಂದು ವೇಳೆ ನೀವು, ‘ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಟ್ಟಿದ್ದೇವೆ’ ಎಂದು ಹೇಳುವುದಾದರೆ ಹಿಜ್ಕೀಯನು, ‘ಯೆರೂಸಲೇಮಿನ ಯಜ್ಞವೇದಿಯ ಮುಂದೆಯೇ ಆರಾಧನೆಮಾಡಬೇಕು’ ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾಸ್ಥಳಗಳನ್ನೂ, ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದ್ದಾನಲ್ಲಾ,

ಹಿಜ್ಕೀಯನು ಒಂದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ದೇವರ ಬೇರೆ ಎಲ್ಲಾ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಕೆಡವಿಸಿ ಬಿಟ್ಟನಲ್ಲವೆ?

¶ ಅವನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರ್ಷ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿ ಇದ್ದ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಿಗೊಳಿಸಿದನು.

ಆದರೆ ಯೆಹೋವನಾದ ನನ್ನನ್ನು ತೊರೆದು, ನನ್ನ ಪವಿತ್ರ ಪರ್ವತವನ್ನು ಮರೆತು, ಶುಭದಾಯಕ ದೇವತೆಗೆ ಔತಣವನ್ನು ಏರ್ಪಡಿಸಿ, ಗತಿದಾಯಕ ದೇವತೆಗೆ ಮದ್ಯವನ್ನು ಬೆರಸಿದ ನಿಮಗೆ ಕತ್ತಿಯನ್ನೇ ಗತಿಯಾಗ ಮಾಡುವೆನು.