TSK

TSK · 2 ಅರಸುಗಳು 21:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದೇವಾಲಯದ ಪ್ರಾಕಾರದಲ್ಲಿ ಮೂರು ಸಾಲು ಕಲ್ಲಿನ ಕಂಬಗಳನ್ನೂ, ಒಂದು ಸಾಲು ದೇವದಾರಿನ ಕಂಬಗಳನ್ನೂ ಇರಿಸಿದನು.

ತರುವಾಯ ಅರಸನು ಮಹಾಯಾಜಕನಾದ ಹಿಲ್ಕೀಯನಿಗೆ, ಅವನ ಕೈಕೆಳಗಿರುವ ಯಾಜಕರ ಮತ್ತು ದ್ವಾರಪಾಲಕರ ಮುಖಾಂತರವಾಗಿ ಬಾಳ್, ಅಶೇರ್ ಎಂಬ ದೇವತೆಗಳಿಗಾಗಿಯೂ, ಆಕಾಶಸೈನ್ಯಗಳಿಗಾಗಿಯೂ, ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಬಯಲಿನಲ್ಲಿ ಅವುಗಳನ್ನು ಸುಟ್ಟು ಬೂದಿಯನ್ನು ಬೇತೇಲಿಗೆ ಕಳುಹಿಸಿದನು.

ಇದಲ್ಲದೆ, ಯೆಹೂದ್ಯರ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಯಜ್ಞವೇದಿಗಳನ್ನೂ, ಮನಸ್ಸೆಯು ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ ಯಜ್ಞವೇದಿಗಳನ್ನೂ ಕೆಡವಿ ಪುಡಿಪುಡಿ ಮಾಡಿ ಅವುಗಳ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.

ಆಲಯದ ಎರಡು ಪ್ರಾಕಾರಗಳಲ್ಲಿಯೂ ಸರ್ವನಕ್ಷತ್ರಮಂಡಲಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿದನು.

¶ ಆತನು ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆತಂದನು; ಇಗೋ, ಯೆಹೋವನ ಆಲಯದ ಬಾಗಿಲ ಮುಂದೆ ಮಂಟಪಕ್ಕೂ ಮತ್ತು ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಆಲಯಕ್ಕೆ ಬೆನ್ನು ಮಾಡಿ ಪೂರ್ವದ ಕಡೆಗೆ ಮುಖ ಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು.

ಅವನು ನನ್ನನ್ನು ಒಳಗಣ ಅಂಗಳದ ಪೂರ್ವಕ್ಕೆ ಕರೆದು ತಂದು, ಅಲ್ಲಿನ ಹೆಬ್ಬಾಗಿಲನ್ನೂ ಅಳೆಯಲು, ಅದರ ಅಳತೆಗಳೆಲ್ಲಾ ಒಂದೇ ಆಗಿ ಕಂಡುಬಂದವು.

ಆ ಮೇಲೆ ಅವನು ಅಂಗಳವನ್ನು ಅಳೆಯಲು, ಅದು ನೂರು ಮೊಳ ಉದ್ದವಾಗಿಯೂ, ನೂರು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು. ಯಜ್ಞವೇದಿಯು ದೇವಸ್ಥಾನದ ಮುಂದೆ ಇತ್ತು.

ದೇವರಾತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆದು ತಂದಿತು. ಆಗ ಯೆಹೋವನ ಮಹಿಮೆಯು ಆಲಯವನ್ನು ತುಂಬಿಕೊಂಡಿತು.