TSK

TSK · 2 ಅರಸುಗಳು 24:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‘ಆತನು ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವನ್ನು ಬಾಬಿಲೋನಿಗೆ ಒಯ್ಯಲ್ಪಡುವ ದಿನವು ಬರುವುದು, ಇಲ್ಲಿ ಏನೂ ಉಳಿಯುವುದಿಲ್ಲ ಎಂದು ಯೆಹೋವನು ಹೇಳುತ್ತಾನೆ.

ಅವನು ಬಂಗಾರದ ಹತ್ತು ದೀಪಸ್ತಂಭಗಳನ್ನು ಮಾಡಿಸಿ ಐದನ್ನು ದೇವಾಲಯದೊಳಗೆ ಬಲಗಡೆಯಲ್ಲಿ, ಐದನ್ನು, ಎಡಗಡೆಯಲ್ಲಿಯೂ ಇರಿಸಿದನು.

ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬಿಲೋನಿಗೆ ಒಯ್ಯಲ್ಪಡುವ ದಿನವು ಬರುವುದು, ಇಲ್ಲೇನೂ ಉಳಿಯುವುದಿಲ್ಲ.

¶ ಇದಲ್ಲದೆ ನಾನು ಯಾಜಕರಿಗೂ ಈ ಸಕಲಜನರಿಗೂ ಹೀಗೆ ನುಡಿದೆನು, “ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಯೆಹೋವನ ಆಲಯದ ಉಪಕರಣಗಳು ಬೇಗನೆ ಬಾಬೆಲಿನಿಂದ ಹಿಂದಕ್ಕೆ ತರಲ್ಪಡುವವು’ ಎಂಬುದಾಗಿ ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ; ನಿಮಗೆ ಸುಳ್ಳನ್ನು ಸಾರುತ್ತಾರೆ.

“ಹಾಗೆಯೇ ಆಗಲಿ, ಯೆಹೋವನು ಹಾಗೆಯೇ ಮಾಡಲಿ! ಯೆಹೋವನು ತನ್ನ ಆಲಯದ ಉಪಕರಣಗಳನ್ನೂ ಸೆರೆಹೋದವರೆಲ್ಲರನ್ನೂ ಬಾಬೆಲಿನಿಂದ ಈ ಸ್ಥಳಕ್ಕೆ ಪುನಃ ಬರಮಾಡಿ ನೀನು ನುಡಿದ ಮಾತುಗಳನ್ನು ನೆರವೇರಿಸಲಿ!

ಬೇಲ್ಶಚ್ಚರನು ಅದನ್ನು ಸವಿಯುತ್ತಾ, ಯೆರೂಸಲೇಮಿನ ದೇವಾಲಯದೊಳಗಿನಿಂದ ತನ್ನ ತಂದೆಯಾದ ನೆಬೂಕದ್ನೆಚ್ಚರನು ತೆಗೆದುಕೊಂಡು ಬಂದಿದ್ದ ಬೆಳ್ಳಿ, ಬಂಗಾರಗಳ ಪಾತ್ರೆಗಳಲ್ಲಿ ತಾನೂ, ತನ್ನ ಮುಖಂಡರೂ, ಪತ್ನಿಯರೂ ಮತ್ತು ಉಪಪತ್ನಿಯರೂ ಕುಡಿಯುವುದಕ್ಕಾಗಿ ಅವುಗಳನ್ನು ತರುವಂತೆ ಆಜ್ಞಾಪಿಸಿದನು.