¶ ಅವರ ದೇವತೆಗಳಿಗೆ ನೀವು ಅಡ್ಡಬಿದ್ದು ನಮಸ್ಕರಿಸಲೂ ಬಾರದು, ಅವರ ಆಚರಣೆಗಳನ್ನು ಅನುಸರಿಸಲೇ ಬಾರದು. ಆ ಜನಗಳನ್ನು ನಿರ್ಮೂಲಮಾಡಿ ವಿಗ್ರಹಸ್ತಂಭಗಳನ್ನು ನಾಶಮಾಡಬೇಕು.
TSK
TSK · 2 ಅರಸುಗಳು 3:2
Treasury of Scripture Knowledge references in ಕನ್ನಡ IRV.
ಅವನು ಯಾರೊಬ್ಬಾಮನಂತೆ ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ, ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದುದರಿಂದ ಹೀಗಾಯಿತು.
ಬಾಳ್ ದೇವರಿಗೋಸ್ಕರ ಸಮಾರ್ಯದಲ್ಲಿ ಒಂದು ಗುಡಿಯನ್ನು ಕಟ್ಟಿಸಿ, ಅದರಲ್ಲಿ ಯಜ್ಞವೇದಿಯನ್ನು ಮಾಡಿಸಿದನು.
ಅಹಾಬನು ಎಲೀಯನನ್ನು ಕಂಡು ಅವನನ್ನು, “ನನ್ನ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ” ಎಂದು ಕೇಳಲು ಅವನು, “ಹೌದು ಕಂಡುಹಿಡಿದ್ದೆನು. ನೀನು ನಿನ್ನನ್ನು ಪಾಪಕ್ಕೆ ಮಾರಿಕೊಂಡು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.
ಇದಲ್ಲದೆ ಅವನು, “ನಾನು ಈ ಹೊತ್ತು ಶಾಫಾಟನ ಮಗನಾದ ಎಲೀಷನ ತಲೆಯನ್ನು ಅವನ ದೇಹದಿಂದ ಬೇರ್ಪಡಿಸದೆ ಹೋದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಆಣೆಯಿಟ್ಟುಕೊಂಡನು.
ಅನಂತರ ಅವನು ಅರಮನೆಯೊಳಕ್ಕೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಸೇವಕರಿಗೆ, “ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ನೋಡಿ ಅದನ್ನು ಸಮಾಧಿಮಾಡಿರಿ, ಆಕೆಯು ರಾಜಪುತ್ರಿಯಾಗಿರುತ್ತಾಳಲ್ಲವೇ” ಎಂದು ಆಜ್ಞಾಪಿಸಿದನು.
ಅವರು ಅಲ್ಲಿನ ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಹಾಕಿದರು.
ಇದಲ್ಲದೆ ಅವನು ತನ್ನ ಸ್ವಂತ ಮಗನನ್ನೇ ಆಹುತಿಕೊಟ್ಟನು. ಕಣಿಕೇಳಿಸುವುದು, ಮಾಟಮಂತ್ರಗಳನ್ನು ಮಾಡಿಸುವುದು, ಜೋತಿಷ್ಯ, ಮುಹೂರ್ತಗಳನ್ನು ನೋಡುವುದು ಮತ್ತು ಭೂತಪ್ರೇತಗಳನ್ನೂ ವಿಚಾರಿಸುವುದು, ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನು ಎಬ್ಬಿಸಿದನು.