TSK

TSK · 2 ಅರಸುಗಳು 5:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಸೌಲನು ಆಳಿಗೆ, “ನೀನು ಹೇಳುವುದು ಒಳ್ಳೆಯದು; ಹೋಗೋಣ ನಡಿ” ಅಂದನು.

¶ ಅರಾಮ್ಯರ ಅರಸನ ಮಂತ್ರಿಗಳು ತಮ್ಮ ಒಡೆಯನಿಗೆ, “ಇಸ್ರಾಯೇಲ್ ದೇವರು ಬೆಟ್ಟಗಳ ದೇವರಾಗಿರುವುದರಿಂದ ಅವರು ನಮ್ಮನ್ನು ಸೋಲಿಸಿದರು. ನಾವು ಅವರೊಡನೆ ಬಯಲಿನಲ್ಲಿ ಯುದ್ಧಮಾಡುವುದಾದರೆ ಹೇಗೂ ಜಯಹೊಂದುವೆವು.

ಎಲೀಷನು ಅದನ್ನು ನೋಡುತ್ತಾ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲರಿಗೆ ರಥಾರಥಾಶ್ವಗಳಾಗಿದ್ದವನೇ” ಎಂದು ಕೂಗಿಕೊಂಡನು. ಎಲೀಯನು ತನಗೆ ಕಾಣಿಸದೆ ಹೋದ ಮೇಲೆ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು.

ಎಲೀಷನು ಅವನಿಗೆ, “ಹೋಗಿ ಯೊರ್ದನ್ ನದಿಯಲ್ಲಿ ಏಳು ಸಾರಿ ಮುಳುಗಿ ಬಾ, ಆಗ ನಿನ್ನ ದೇಹವು ಮೊದಲಿನಂತಾಗುವುದು; ನೀನು ಶುದ್ಧನಾಗುವಿ” ಎಂದು ಹೇಳಿ ಕಳುಹಿಸಿದನು.

ಹಜಾಯೇಲನು ದಮಸ್ಕದ ಶ್ರೇಷ್ಠ ವಸ್ತುಗಳಲ್ಲಿ ನಲವತ್ತು ಒಂಟೆಗಳು ಹೊರುವಷ್ಟು ಕಾಣಿಕೆಗಳನ್ನು ತೆಗೆದುಕೊಂಡು ಎಲೀಷನ ಬಳಿಗೆ ಹೋಗಿ ಅವನ ಮುಂದೆ ನಿಂತು, “ನಿನ್ನ ಮಗನೂ ಅರಾಮ್ಯರ ಅರಸನೂ ಆದ ಬೆನ್ಹದದನು ತನಗೆ ಸ್ವಸ್ಥವಾಗುವದೋ, ಇಲ್ಲವೋ ಎಂಬುದನ್ನು ವಿಚಾರಿಸುವುದಕ್ಕಾಗಿ ನನ್ನನ್ನು ನಿನ್ನ ಬಳಿ ಕಳುಹಿಸಿದ್ದಾನೆ” ಎಂದು ಹೇಳಿದನು.

ಆದರೆ ಮನುಷ್ಯರಲ್ಲಿ ಆತ್ಮವೊಂದುಂಟು, ಸರ್ವಶಕ್ತನಾದ ದೇವರ ಶ್ವಾಸದಿಂದ ಅವರಿಗೆ ವಿವೇಕ ದೊರೆಯುತ್ತದೆ.

ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.

ಅರಮನೆಯ ಕಂಚುಕಿಯಾದ ಎಬೆದ್ಮೆಲೆಕನೆಂಬ ಕೂಷ್ಯನು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದ್ದಾರೆಂದು ತಿಳಿದನು.

‹ಇದಲ್ಲದೆ ಭೂಲೋಕದಲ್ಲಿ ಯಾರನ್ನೂ ನಿಮ್ಮ ತಂದೆ ಎಂದು ಕರೆಯಬೇಡಿರಿ; ಏಕೆಂದರೆ ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ›

ಈಗ ನೀನೇಕೆ ತಡಮಾಡುತ್ತೀ? ಎದ್ದು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ’ ಅಂದನು.

ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು.

ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.

ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.

ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.