TSK

TSK · 2 ಅರಸುಗಳು 7:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ನೋಹನ ಜೀವಮಾನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ಭೂಮಿಯ ಕೆಳಗಿರುವ ಸಾಗರದ ಒರತೆಗಳು ತೆರೆದುಕೊಂಡವು; ಆಕಾಶದ ತೂಬುಗಳೂ ತೆರೆದವು.

ಇವರು ನನ್ನ ಬಳಿಗೆ ಅಳುತ್ತಾ ಬಂದು, ‘ಮಾಂಸವನ್ನು ನಮಗೆ ತಿನ್ನಲಿಕ್ಕೆ ಕೊಡು’ ಎಂದು ಕೇಳುತ್ತಾರಲ್ಲಾ, ಇಷ್ಟು ಜನಕ್ಕೆ ಬೇಕಾದ ಮಾಂಸವು ನನಗೆ ಎಲ್ಲಿಂದ ದೊರಕೀತು?

ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?

ಆದರೆ ಈ ವಿಷಯದಲ್ಲಿ ಯೆಹೋವನು ನನ್ನನ್ನು ಕ್ಷಮಿಸಲಿ, ನನ್ನ ಒಡೆಯನು ಆರಾಧನೆಗೋಸ್ಕರ ರಿಮ್ಮೋನನ ದೇವಸ್ಥಾನಕ್ಕೆ ಹೋಗಿ ನನ್ನ ಕೈಹಿಡಿದು ಆ ದೇವತೆಗೆ ನಮಸ್ಕಾರ ಮಾಡುವಾಗ ನಾನೂ ನಮಸ್ಕಾರ ಮಾಡಬೇಕಾಗುವುದು. ಈ ಒಂದು ವಿಷಯದಲ್ಲಿ ಮಾತ್ರ ಯೆಹೋವನು ನನಗೆ ಕ್ಷಮೆಯನ್ನು ಅನುಗ್ರಹಿಸಬೇಕು” ಎಂದನು.

ಆ ಸರದಾರನು ದೇವರ ಮನುಷ್ಯನಿಗೆ, “ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ, ಇದು ಸಂಭವಿಸಲು ಸಾಧ್ಯವಿಲ್ಲ?” ಎಂದು ಹೇಳಿದ್ದನು. ಆಗ ದೇವರ ಮನುಷ್ಯನಾದ ಎಲೀಷನು ಅವನಿಗೆ, “ನೀನು, ಅದನ್ನು ಕಣ್ಣಾರೆ ಕಾಣುವಿ, ಆದರೆ ಅದನ್ನು ಅನುಭವಿಸುವುದಿಲ್ಲ” ಎಂದು ನುಡಿದಿದ್ದನು.

ಅವರು ಆತನಿಗೆ ವಿರುದ್ಧವಾಗಿ ಹೇಳಿದ್ದೇನೆಂದರೆ, “ದೇವರು ಅರಣ್ಯದಲ್ಲಿ ಊಟಕ್ಕೆ ಬಡಿಸಬಲ್ಲನೋ?

ಎಫ್ರಾಯೀಮಿಗೆ ಶಿರಸ್ಸು ಸಮಾರ್ಯ, ಸಮಾರ್ಯಕ್ಕೆ ಶಿರಸ್ಸು ರೆಮಲ್ಯನ ಮಗನು ತಾನೇ. ನೀವು ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ” ಎಂಬುದೇ.

ಅವರಲ್ಲಿ ಕೆಲವರಿಗೆ ನಂಬಿಕೆ ಇರಲಿಲ್ಲವಾದರೂ? ಅವರ ಅಪನಂಬಿಕೆಯಿಂದ ದೇವರು ನಂಬಿಕೆಗೆ ತಪ್ಪುವವನಾದಾನೋ? ಎಂದಿಗೂ ಇಲ್ಲ.

ಮತ್ತು ದೇವರು ನಲವತ್ತು ವರ್ಷ ಯಾರ ಮೇಲೆ ಬಹಳವಾಗಿ ಕೋಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದುಹೋದವು.