TSK

TSK · 2 ಪೇತ್ರನು 1:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅದಲ್ಲದೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಗೊಂಡು ನಾನು ಯೊರ್ದನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಆ ಒಳ್ಳೆಯ ದೇಶವನ್ನು ಸೇರದೆ,

ಭೂಲೋಕದವರೆಲ್ಲರೂ ಹೋಗುವ ಮಾರ್ಗವನ್ನು ನಾನು ಈಗ ಅನುಸರಿಸಬೇಕಾಗಿದೆ. ನಿಮ್ಮ ದೇವರಾದ ಯೆಹೋವನು ನಿಮ್ಮ ವಿಷಯದಲ್ಲಿ ನುಡಿದ ಆಶೀರ್ವಾದದ ವಚನಗಳಲ್ಲಿ ಒಂದೂ ವ್ಯರ್ಥವಾಗಲಿಲ್ಲ. ಎಲ್ಲವೂ ತಪ್ಪದೆ ನೆರವೇರಿದೆ ಎಂಬುದು ನಿಮಗೆ ಮನದಟ್ಟಾಗಿದೆಯಲ್ಲ.

‹“ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟಬಂದ ಕಡೆಗೆ ತಿರುಗಾಡುತ್ತಿದ್ದೀ. ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು”› ಎಂದು ಹೇಳಿದನು.

ಯಾಕೆಂದರೆ ನಾನಂತೂ ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ. ನನ್ನ ನಿರ್ಗಮನದ ಸಮಯವು ಸಮೀಪವಾಗುತ್ತಾ ಬಂದಿದೆ.