TSK

TSK · 2 ಪೇತ್ರನು 3:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಗ ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳನ್ನು ಗೊತ್ತುಮಾಡಿಕೊಂಡಿದ್ದ ಅಳಿಯಂದಿರಿಗೆ ಈ ಸಂಗತಿಯನ್ನು ತಿಳಿಸಿ, “ನೀವೆದ್ದು, ಈ ಸ್ಥಳವನ್ನು ಬಿಟ್ಟು ಹೋಗಿರಿ ಯೆಹೋವನು ಈ ಊರನ್ನು ನಾಶಮಾಡುತ್ತಾನೆ” ಎಂದು ಹೇಳಿದನು. ಆದರೆ ಅವರು ಲೋಟನು ಅಪಹಾಸ್ಯ ಮಾಡುತ್ತಿದ್ದಾನೆ ಎಂದುಕೊಂಡರು.

ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೇ ನಡೆಯದಿರುವ ಕಾರಣ ಅಪರಾಧ ಮಾಡಬೇಕೆಂಬ ಯೋಚನೆಯು ಮನುಷ್ಯರ ಹೃದಯದಲ್ಲಿ ತುಂಬಿ ತುಳುಕುವುದು.

ಅವರು ಯೆಹೋವನನ್ನು ಅಲ್ಲಗಳೆದು, ‘ಆತನು ಏನು ಮಾಡುವನು? ನಮಗೆ ಕೇಡುಬಾರದು, ಖಡ್ಗವೂ, ಕ್ಷಾಮವೂ ನಮ್ಮ ಕಣ್ಣಿಗೆ ಬೀಳವು;

ಇವರು, ‘ಮನೆಗಳನ್ನು ಕಟ್ಟಿಕೊಳ್ಳುವ ಕಾಲವು ಬಂದಿಲ್ಲ; ಈ ಪಟ್ಟಣವು ಒಂದು ಹಂಡೆ, ನಾವು ಅದರಲ್ಲಿನ ಮಾಂಸ’ ಎಂದು ಹೇಳುತ್ತಾರೆ.

¶ ನೀವು ಯೆಹೋವನನ್ನು ನಿಮ್ಮ ಮಾತುಗಳಿಂದ ಬೇಸರಗೊಳಿಸಿದ್ದೀರಿ. “ಯಾವ ವಿಷಯದಲ್ಲಿ ಆತನನ್ನು ಬೇಸರಗೊಳಿಸಿದ್ದೇವೆ ಅನ್ನುತ್ತೀರಾ? ಪ್ರತಿಯೊಬ್ಬ ದುರಾಚಾರಿಯು ಯೆಹೋವನ ದೃಷ್ಟಿಗೆ ಒಳ್ಳೆಯವನು. ಅವರೇ ಆತನಿಗೆ ಇಷ್ಟ. ನ್ಯಾಯತೀರಿಸುವ ದೇವರು ಎಲ್ಲಿದ್ದಾನೆ?” ಎಂದು ನೀವು ಕೇಳುವುದರಿಂದ ಆತನ ಗಮನದಲ್ಲಿ ಇದ್ದೀರಿ.

‹ಆದರೆ ಆ ದುಷ್ಟ ಆಳು, ‘ನನ್ನ ಯಜಮಾನನು ಬರುವುದಕ್ಕೆ ತಡ ಮಾಡುತ್ತಾನೆ’ ಎಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು›

‹ಅಂಥ ಸಂಕಟವು ದೇವರು ಜಗತ್ತನ್ನು ಸೃಷ್ಟಿಸಿದ ದಿನದಿಂದ ಮೊದಲುಗೊಂಡು ಈ ದಿನದವರೆಗೂ ಆಗಲಿಲ್ಲ; ಇನ್ನು ಮುಂದೆ ಆಗುವುದೂ ಇಲ್ಲ.›

ನಮ್ಮ ಕರ್ತನಾದ ಯೇಸು ಹಿಂತಿರುಗಿ ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ, ನಮ್ಮ ಸಂತೋಷವೂ, ನಾವು ಹೊಗಳಿಕೊಳ್ಳುವ ಕಿರೀಟವೂ ಯಾರು? ನೀವೇ ಅಲ್ಲವೇ.