ಆದಿಕಾಂಡ 9:15
TSK
ಆಗ ನಾನು ನಿಮ್ಮನ್ನೂ, ಎಲ್ಲಾ ಜೀವರಾಶಿಗಳನ್ನೂ ಕುರಿತು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಮುಂದೆ ನೀರು ಹೆಚ್ಚಿ ಎಲ್ಲಾ ಭೂಜೀವಿಗಳನ್ನು ಹಾಳುಮಾಡುವ ಪ್ರಳಯವಾಗುವುದಿಲ್ಲ.
TSK
Treasury of Scripture Knowledge references in ಕನ್ನಡ IRV.
ಆಗ ನಾನು ನಿಮ್ಮನ್ನೂ, ಎಲ್ಲಾ ಜೀವರಾಶಿಗಳನ್ನೂ ಕುರಿತು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಮುಂದೆ ನೀರು ಹೆಚ್ಚಿ ಎಲ್ಲಾ ಭೂಜೀವಿಗಳನ್ನು ಹಾಳುಮಾಡುವ ಪ್ರಳಯವಾಗುವುದಿಲ್ಲ.
‹ಹೇಗೆಂದರೆ ಜಲಪ್ರಳಯಕ್ಕೆ ಮುಂಚಿನ ದಿನಗಳಲ್ಲಿ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆಮಾಡಿಕೊಳ್ಳುತ್ತಾ, ಮದುವೆಮಾಡಿಕೊಡುತ್ತಾ ಇದ್ದರು.›
ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು.