1 ಸಮುವೇಲನು 31:13
TSK
ಅವರ ಎಲುಬುಗಳನ್ನು ಯಾಬೇಷಿನಲ್ಲಿದ್ದ ಪಿಚುಲ ವೃಕ್ಷದ ಕೆಳಗೆ ಸಮಾಧಿಮಾಡಿ, ಏಳು ದಿನ ಉಪವಾಸ ಮಾಡಿದರು.
TSK
Treasury of Scripture Knowledge references in ಕನ್ನಡ IRV.
ಅವರ ಎಲುಬುಗಳನ್ನು ಯಾಬೇಷಿನಲ್ಲಿದ್ದ ಪಿಚುಲ ವೃಕ್ಷದ ಕೆಳಗೆ ಸಮಾಧಿಮಾಡಿ, ಏಳು ದಿನ ಉಪವಾಸ ಮಾಡಿದರು.
ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿ ತಟ್ಟನ್ನೇ ಕಟ್ಟಿಕೊಂಡಿದ್ದೆನು; ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು. ನನ್ನ ಪ್ರಾರ್ಥನೆಯು ಕೇಳಲ್ಪಡಲಿಲ್ಲ.
ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ, ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲಿರುಳೂ ಅಳಬೇಕಲ್ಲಾ!
‹ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ;›‹ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.›
¶ ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ, ಪರಸ್ಪರ ಅನುಕಂಪವುಳ್ಳವರಾಗಿರಿ, ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ, ಕರುಣೆಯೂ, ದೀನಭಾವವೂ ಉಳ್ಳವರಾಗಿರಿ.