TSK

TSK · 2 ಸಮುವೇಲನು 10:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ, “ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರನ್ನು ಕೆಡಿಸಿದ್ದರಿಂದ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ. ಈ ದೇಶದವರು ಒಟ್ಟಾಗಿ ನನ್ನ ವಿರುದ್ಧ ಯುದ್ಧಕ್ಕೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು” ಎಂದನು.

(ಬಾಷಾನ್ ದೇಶವು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡನು. ಅವನು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನ ವರೆಗೂ ಉಂಟು.)

ಇಸ್ರಾಯೇಲ್ಯರು ಗೆಷೂರ‍್ಯರನ್ನೂ, ಮಾಕತೀಯರನ್ನೂ ದೇಶದೊಳಗಿಂದ ಹೊರಡಿಸಲಿಲ್ಲ. ಏಕೆಂದರೆ ಆದ್ದರಿಂದ ಗೆಷೂರ‍್ಯರೂ ಮಾಕತೀಯರೂ ಅವರು ಇಂದಿನವರೆಗೂ ಇಸ್ರಾಯೇಲ್ಯರ ಮಧ್ಯದಲ್ಲಿ ಇರುತ್ತಾರೆ.

ಆಗ ಗಿಲ್ಯಾದಿನ ಹಿರಿಯರು ಯೆಪ್ತಾಹನನ್ನು ಟೋಬ್ ದೇಶದಿಂದ ಕರೆದುಕೊಂಡು ಬರುವುದಕ್ಕಾಗಿ ಅಲ್ಲಿಗೆ ಹೋದರು.

ಸೌಲನು ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದ್ದರಿಂದ ತಾವು ಅವರ ದ್ವೇಷಕ್ಕೆ ಗುರಿಯಾದೆವೆಂದು ಇಸ್ರಾಯೇಲರು ತಿಳಿದು ಗಿಲ್ಗಾಲಿಗೆ ಬಂದು ಸೌಲನನ್ನು ಕೂಡಿಕೊಂಡರು.

¶ ದಾವೀದನು ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೆಜೆರನನ್ನು ಸೋಲಿಸಿದನು.

ಚೋಬದ ಅರಸನಾದ ರೆಹೋಬನ ಮಗ ಹದದೆಜೆರನಿಂದಲೂ ಪಡೆದುಕೊಂಡ ಬೆಳ್ಳಿ, ಬಂಗಾರವನ್ನೂ ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.

ದಾವೀದನು ಚೋಬದವರನ್ನು ಸಂಹರಿಸಿದಾಗ ಅವನು ಚೋಬದ ಅರಸನೂ ಒಡೆಯನೂ ಆದ ಹದದೆಜೆರನನ್ನು ಬಿಟ್ಟು ಓಡಿಹೋಗಿ ಕೆಲವು ಜನರನ್ನು ಕೂಡಿಸಿಕೊಂಡು ತಾನು ಅವರ ನಾಯಕನಾಗಿ ಅವರೊಡನೆ ದಮಸ್ಕಕ್ಕೆ ಬಂದು ಅಲ್ಲಿ ಅರಸನಾದನು.

ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಹೋಗಬೇಡ, ಅವನು ನಿನ್ನ ಮಾನ ಕಳೆದ ಮೇಲೆ ಕಡೆಯಲ್ಲಿ ಏನು ಮಾಡಬಲ್ಲೆ, ನೋಡಿಕೋ.