(ರೆಫಾಯರೊಳಗೆ ಬಾಷಾನಿನ ಅರಸನಾದ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದ್ದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈ ಅಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ, ಅಗಲ ನಾಲ್ಕು ಮೊಳ.)
TSK
TSK · 2 ಸಮುವೇಲನು 11:1
Treasury of Scripture Knowledge references in ಕನ್ನಡ IRV.
1 ಅರಸುಗಳು 20:22
TSK
¶ ಆಗ ಪ್ರವಾದಿಯು ಪುನಃ ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ಅರಾಮ್ಯರ ಅರಸನು ಮುಂದಿನ ವರ್ಷದಲ್ಲಿ ಇನ್ನೊಮ್ಮೆ ನಿನಗೆ ವಿರುದ್ಧವಾಗಿ ಬರುತ್ತಾನೆ. ಆದುದರಿಂದ ನೀನು ಹೋಗಿ ನಿನ್ನನ್ನು ಬಲಪಡಿಸಿಕೋ, ಜಾಗರೂಕನಾಗಿದ್ದು ನೀನು ಮಾಡತಕ್ಕದ್ದೇನೆಂಬುದನ್ನು ಆಲೋಚಿಸು” ಎಂದನು.
¶ ಮರುವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಯೋವಾಬನು ಬಲವಾದ ಸೈನ್ಯವನ್ನು ಯುದ್ಧಕ್ಕೆ ಮುನ್ನಡೆಸಿ, ಅಮ್ಮೋನಿಯರ ಪ್ರಾಂತ್ಯಗಳನ್ನು ವಶಪಡಿಸಿಕೊಂಡು ರಬ್ಬಕ್ಕೆ ಹೋಗಿ ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು. ಯೋವಾಬನು ರಬ್ಬ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.
ಕೀರ್ತನೆಗಳು 60:9
TSK
ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು?
ಅಮ್ಮೋನ್ಯರ ರಬ್ಬಾ ಎಂಬ ಪಟ್ಟಣಕ್ಕೂ, ಯೆಹೂದದೊಳಗೆ ಕೋಟೆ ಕೊತ್ತಲಗಳಿಂದ ಕೂಡಿದ ಯೆರೂಸಲೇಮಿಗೂ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು.