ಆದಿಕಾಂಡ 39:7
TSK
ಹೀಗಿರುವಲ್ಲಿ ಯೋಸೇಫನ ದಣಿಯ ಹೆಂಡತಿಯು ಅವನನ್ನು ಮೋಹಿಸಿ “ನನ್ನ ಸಂಗಡ ಸಂಗಮಿಸಲು ಬಾ” ಎಂದಳು.
TSK
Treasury of Scripture Knowledge references in ಕನ್ನಡ IRV.
ಹೀಗಿರುವಲ್ಲಿ ಯೋಸೇಫನ ದಣಿಯ ಹೆಂಡತಿಯು ಅವನನ್ನು ಮೋಹಿಸಿ “ನನ್ನ ಸಂಗಡ ಸಂಗಮಿಸಲು ಬಾ” ಎಂದಳು.
¶ “‘ಸ್ತ್ರೀಗೆ ರಕ್ತಸ್ರಾವವಾದರೆ ಅವಳು ಏಳು ದಿನಗಳ ತನಕ ಪ್ರತ್ಯೇಕವಾಗಿರಬೇಕು. ಅವಳನ್ನು ಮುಟ್ಟಿದವರು ಆ ದಿನದ ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.
¶ “ವ್ಯಭಿಚಾರ ಮಾಡಬಾರದು.
ನೀವು ಕಳ್ಳರೊಡನೆ ಸೇರಿ ಅವರಿಗೆ ಸಮ್ಮತಿ ನೀಡುತ್ತೀರಿ; ಜಾರರ ಒಡನಾಟದಲ್ಲಿ ನೀವು ಸಂತೋಷದಿಂದ ಇರುತ್ತೀರಿ.
ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು; ನನ್ನ ದೋಷವನ್ನು ಪರಿಹರಿಸಿ, ನನ್ನನ್ನು ಶುದ್ಧಿಗೊಳಿಸು.
ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಗಳಿಂದ ಸೆಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.