ಆದಿಕಾಂಡ 34:7
TSK
ಯಾಕೋಬನ ಗಂಡುಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದಾಗ ವ್ಯಸನಪಟ್ಟು ಬಹಳ ಕೋಪಗೊಂಡರು. ಶೆಕೆಮನು ಯಾಕೋಬನ ಮಗಳ ಮಾನಭಂಗ ಮಾಡಿ ಇಸ್ರಾಯೇಲರೊಳಗೆ ಬಹಳ ಅವಮಾನಕರವಾದ ಕೆಲಸವನ್ನು ಮಾಡಿದನು.
TSK
Treasury of Scripture Knowledge references in ಕನ್ನಡ IRV.
ಯಾಕೋಬನ ಗಂಡುಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದಾಗ ವ್ಯಸನಪಟ್ಟು ಬಹಳ ಕೋಪಗೊಂಡರು. ಶೆಕೆಮನು ಯಾಕೋಬನ ಮಗಳ ಮಾನಭಂಗ ಮಾಡಿ ಇಸ್ರಾಯೇಲರೊಳಗೆ ಬಹಳ ಅವಮಾನಕರವಾದ ಕೆಲಸವನ್ನು ಮಾಡಿದನು.
ತಂದೆಯ ಮತ್ತೊಬ್ಬ ಹೆಂಡತಿಯಲ್ಲಿ ಹುಟ್ಟಿದವಳ ಜೊತೆ ಸಂಗಮಿಸಬಾರದು; ಆಕೆ ಸಹೋದರಿ.
ಅವನು ಅವಳನ್ನು ಮಾನಭಂಗಪಡಿಸಿದ್ದರಿಂದ, ಅವಳ ತಂದೆಗೆ ಐವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. ಅವನು ಬದುಕುವ ತನಕ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.
ಅವರು ಇಸ್ರಾಯೇಲರಲ್ಲಿ ನಡೆಸಿದ ಇಂಥ ಕೆಟ್ಟ ಮತ್ತು ಕ್ರೂರ ಕೆಲಸವು ಎಲ್ಲರಿಗೂ ಗೊತ್ತಾಗಲೆಂದು ನಾನು ಆಕೆಯ ಶವವನ್ನು ತುಂಡುಮಾಡಿ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿದೆನು.
ಅಲ್ಪಬುದ್ಧಿಯುಳ್ಳ ಅನೇಕ ಯುವಕರು ಕಾಣಿಸಿದರು. ಅವರಲ್ಲಿ ಜ್ಞಾನಹೀನನಾದ ಒಬ್ಬ ಯೌವನಸ್ಥನನ್ನು ಕಂಡೆನು.