TSK

TSK · 2 ಸಮುವೇಲನು 13:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ರಾತ್ರಿಯಲ್ಲಿ ದೇವರು ಅರಾಮ್ಯನಾದ ಲಾಬಾನನ ಕನಸಿನಲ್ಲಿ ಬಂದು, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು” ಎಂದನು.

¶ “‘ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.

ವ್ಯಾಜ್ಯವಾಡಿದವನ ಸಂಗಡಲೇ ಅದನ್ನು ಚರ್ಚಿಸು, ಒಬ್ಬನ ಗುಟ್ಟನ್ನೂ ಬಯಲುಮಾಡಬೇಡ.

ತನ್ನ ಹಗೆಯನ್ನು ವಂಚನೆಯಿಂದ ಮರೆಮಾಚಿಕೊಂಡಿದ್ದರೂ, ಅವನ ಕೆಟ್ಟತನವು ಸಭೆಯಲ್ಲಿ ಬೈಲಾಗುವುದು.

ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ, ಕೋಪಕ್ಕೆ ಮೂಢರ ಎದೆಯೇ ಲೇಸು.

“ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ.

ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ.

ತನ್ನ ಸಹೋದರನನ್ನು ದ್ವೇಷಿಸುವವನು ಕೊಲೆಗಾರನಾಗಿದ್ದಾನೆ. ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ.