TSK

TSK · 2 ಸಮುವೇಲನು 13:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ತೀರಿಕೊಂಡಳು. ಯೆಹೂದನು ತನಗೆ ದುಃಖಶಮನವಾದ ಮೇಲೆ ತನ್ನ ಕುರಿಗಳ ಉಣ್ಣೆ ಕತ್ತರಿಸುವವರ ಬಳಿಗೆ ತನ್ನ ಸ್ನೇಹಿತನಾದ ಹೀರಾ ಎಂಬ ಅದುಲ್ಲಾಮ್ಯನ ಜೊತೆಯಲ್ಲಿ ಗಟ್ಟಾ ಹತ್ತಿ ತಿಮ್ನಾ ಊರಿಗೆ ಹೋದನು.

ನಾಬಾಲನು ಉಣ್ಣೆ ಕತ್ತರಿಸುತ್ತಿದ್ದಾನೆಂಬ ವರ್ತಮಾನವು ಅಲ್ಲಿ ಮರುಭೂಮಿಯಲ್ಲಿದ್ದ ದಾವೀದನಿಗೆ ಮುಟ್ಟಿತು.

¶ ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ ಬಹಳವಾಗಿ ಕುಡಿದು ಬಹು ಸಂಭ್ರಮದಿಂದ ಕಾರಣ ಆಕೆಯು ಮರುದಿನದ ವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ.

ಆತನು ಹೋರಿ, ಕುರಿ ಮೊದಲಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ನಿನ್ನ ಸೇವಕನಾದ ಸೊಲೊಮೋನನ ಹೊರತಾಗಿ ಎಲ್ಲಾ ರಾಜಪುತ್ರರನ್ನೂ, ಯಾಜಕನಾದ ಎಬ್ಯಾತಾರನನ್ನೂ, ಸೇನಾಧಿಪತಿಯಾದ ಯೋವಾಬನನ್ನೂ ಔತಣಕ್ಕೆ ಕರೆದಿದ್ದಾನೆ.

¶ ಅನೇಕ ಕುರಿಹಿಂಡುಗಳನ್ನು ಹೊಂದಿದ್ದ ಮೋವಾಬ್ಯರ ಅರಸನಾದ ಮೇಷನೆಂಬುವನು ಇಸ್ರಾಯೇಲರ ಅರಸನಿಗೆ ಒಂದು ಲಕ್ಷ ಕುರಿಗಳ ಮತ್ತು ಒಂದು ಲಕ್ಷ ಟಗರುಗಳ ಉಣ್ಣೆಯನ್ನು ಕಪ್ಪವಾಗಿ ಕೊಡುತ್ತಿದ್ದನು.