TSK

TSK · 2 ಸಮುವೇಲನು 13:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು.

ಯೆಹೂದನು ತಾನು ಇಟ್ಟಿದ್ದ ಒತ್ತೆಯನ್ನು ಆ ಹೆಂಗಸಿನ ಕೈಯಿಂದ ಬಿಡಿಸಿಕೊಳ್ಳುವುದಕ್ಕೊಸ್ಕರ ತನ್ನ ಸ್ನೇಹಿತನಾದ ಅದುಲ್ಲಾಮ್ಯನ ಕೈಯಲ್ಲಿ ಹೋತಮರಿಯನ್ನು ಕಳುಹಿಸಿದಾಗ ಆಕೆಯು ಅವನಿಗೆ ಸಿಗಲಿಲ್ಲ.

ತರುವಾಯ ಇಷಯನು ಶಮ್ಮನನ್ನು ಬರಮಾಡಲು ಸಮುವೇಲನು, “ಯೆಹೋವನು ಇವನನ್ನೂ ಆರಿಸಿಕೊಳ್ಳಲಿಲ್ಲ” ಎಂದು ಹೇಳಿದನು.

ತೆಕೋವ ಪಟ್ಟಣದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆದುಕೊಂಡು ಬರಲು ತಿಳಿಸಿದನು. ಅವನು ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹು ದಿನಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ಶೋಕವಸ್ತ್ರಗಳನ್ನು ಧರಿಸಿಕೊಂಡು ಎಣ್ಣೆಹಚ್ಚಿಕೊಳ್ಳದೆ,

ಅವನು ಇಸ್ರಾಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮಿಯಾನನ ಮಗ ಯೋನಾತಾನನು ಅವನನ್ನು ಕೊಂದು ಹಾಕಿದನು.

¶ ವಿವೇಕಿಯೂ, ಶಾಸ್ತ್ರಜ್ಞನೂ ಆದ ಯೋನಾತಾನನೆಂಬ ದಾವೀದನ ಚಿಕ್ಕಪ್ಪನು, ಮಂತ್ರಿಯೂ ಹಕ್ಮೋನಿಯ ಮಗನಾದ ಯೆಹೀಯೇಲನು ರಾಜಪುತ್ರಪಾಲಕನೂ ಆಗಿದ್ದರು.

ಅದಕ್ಕೆ ಅವನ ಪತ್ನಿಯಾದ ಜೆರೆಷಳೂ ಅವನ ಎಲ್ಲಾ ಆಪ್ತರೂ, “ಐವತ್ತು ಮೊಳ ಎತ್ತರವಾದ ಒಂದು ಗಲ್ಲುಗಂಬವನ್ನು ಸಿದ್ಧಮಾಡಿಸಿ ನಾಳೆ ಅರಸನ ಅಪ್ಪಣೆಯನ್ನು ಪಡೆದುಕೊಂಡು ಮೊರ್ದೆಕೈಯನ್ನು ಅದಕ್ಕೆ ನೇತುಹಾಕಿಸಬೇಕು; ಆ ಮೇಲೆ ನೀನು ಸಂತೋಷದಿಂದ ಅರಸನ ಜೊತೆಯಲ್ಲಿ ಔತಣಕ್ಕೆ ಹೋಗಬಹುದು” ಎಂದು ಹೇಳಿದರು. ಹಾಮಾನನು ಈ ಮಾತಿಗೆ ಮೆಚ್ಚಿ ಗಲ್ಲುಗಂಬವನ್ನು ಸಿದ್ಧಮಾಡಿಸಿದನು.

ಉದಾರಿಯ ಕಟಾಕ್ಷವನ್ನು ಅನೇಕರು ಕೋರುವರು, ದಾನಶೂರನಿಗೆ ಪ್ರತಿಯೊಬ್ಬನೂ ಸ್ನೇಹಿತನಲ್ಲವೇ.

ಯಾಕೆಂದರೆ ಇಹಲೋಕದ ಜ್ಞಾನವು ದೇವರ ಮುಂದೆ ಮೂರ್ಖತನವಾಗಿದೆ. “ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೆ ಹಿಡಿದುಕೊಳ್ಳುತ್ತಾನೆಂತಲೂ,”