TSK

TSK · 2 ಸಮುವೇಲನು 13:37

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಎರಡನೆಯವನು ಕಿಲಾಬನು. ಇವನು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಲ್ಲಿ ಹುಟ್ಟಿದವನು. ಮೂರನೆಯವನು ಅಬ್ಷಾಲೋಮನು. ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಪುತ್ರನು.

ಆಕೆಯು, “ಅರಸನು ಈ ತೀರ್ಪು ಕೊಟ್ಟಿದ್ದರಿಂದ ತನ್ನನ್ನು ತಾನೇ ಅಪರಾಧಿ ಎಂದು ನಿರ್ಣಯಿಸಿದ ಹಾಗಾಯಿತು. ಅವನು ತಳ್ಳಲ್ಪಟ್ಟ ಮಗನನ್ನು ಸೇರಿಸಿಕೊಳ್ಳದೆ ಹೋಗುವುದರಿಂದ ದೇವಪ್ರಜೆಗೆ ವಿರೋಧವಾಗಿ ಆಲೋಚನೆ ಮಾಡಿದ ಹಾಗಾಯಿತು. ಅರಸನು ಹೀಗೇಕೆ ಮಾಡಬೇಕು?

ಅದಕ್ಕೆ ಅಬ್ಷಾಲೋಮನು ಅವನಿಗೆ, “ನಾನು ಗೆಷೂರಿನಿಂದ ಇಲ್ಲಿಗೆ ಬಂದದ್ದೇಕೆ, ಅಲ್ಲೇ ಇದ್ದರೆ ಒಳ್ಳೆಯದಾಗುತ್ತಿತ್ತಲ್ಲವೋ ಎಂದು ನಿನ್ನ ಮುಖಾಂತರ ಅರಸನಿಗೆ ತಿಳಿಸುವುದಕ್ಕಾಗಿ ನಿನ್ನನ್ನು ಕರೇಕಳುಹಿಸಿದೆನು. ನಾನು ಹೇಗೂ ಅರಸನ ದರ್ಶನ ಮಾಡಬೇಕು. ನಾನು ಅಪರಾಧಿಯಾಗಿದ್ದರೆ ನನ್ನನ್ನು ಕೊಲ್ಲಿಸಲಿ” ಎಂದನು.

ಮೂರನೆಯವನು ಅಬ್ಷಾಲೋಮ್, ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಮಗನು. ನಾಲ್ಕನೆಯವನು ಅದೋನೀಯ. ಇವನು ಹಗ್ಗೀತಳ ಪುತ್ರನು.