TSK

TSK · 2 ಸಮುವೇಲನು 13:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಸಂಗಮಿಸಬಾರದು; ಅವರು ಒಡ ಹುಟ್ಟಿದವರು ಇಲ್ಲವೇ ಪರಸ್ತ್ರೀಯಲ್ಲಿ ಹುಟ್ಟಿದವರಾದರೂ ನಿಮಗೆ ಅಕ್ಕತಂಗಿಯರಲ್ಲವೇ.

ಆಗ ಅವನ ಹೆಂಡತಿಯಾದ ಈಜೆಬೆಲಳು ಅವನ ಬಳಿಗೆ ಬಂದು ಅವನನ್ನು, “ನೀನು ಯಾಕೆ ಊಟಮಾಡುವುದಿಲ್ಲ? ನಿನಗೆ ಯಾವ ಚಿಂತೆ ಇರುತ್ತದೆ?” ಎಂದು ಕೇಳಿದಳು.

ಆದರೂ ಮೊರ್ದೆಕೈ ಎಂಬ ಯೆಹೂದ್ಯನು ಅರಮನೆಯ ಬಾಗಿಲಿನಲ್ಲಿ ನನ್ನ ಕಣ್ಣ ಮುಂದೆ ಕುಳಿತಿರುವವರೆಗೂ ಇದೆಲ್ಲದರಿಂದ ನನಗೆ ತೃಪ್ತಿಯಾಗುವುದಿಲ್ಲ” ಅಂದನು.

ಅಸಹ್ಯ ಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ನುಡಿಯುತ್ತಾನೆ.

‹ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.›