TSK

TSK · 2 ಸಮುವೇಲನು 14:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀನು ಸ್ನಾನಮಾಡಿ, ಸುಗಂಧತೈಲವನ್ನು ಹಚ್ಚಿಕೊಂಡು, ಶ್ರೇಷ್ಠವಸ್ತ್ರಗಳನ್ನು ಧರಿಸಿಕೊಂಡು ಅಲ್ಲಿಗೆ ಹೋಗು; ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವರೆಗೂ ಮರೆಯಾಗಿದ್ದು.

ಆಗ ದಾವೀದನು ನೆಲದಿಂದೆದ್ದು, ಸ್ನಾನ ಮಾಡಿ, ತೈಲ ಹಚ್ಚಿಕೊಂಡು, ತನ್ನ ಬಟ್ಟೆಗಳನ್ನು ಬದಲಿಸಿ, ಯೆಹೋವನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರ ತರಿಸಿ ಊಟಮಾಡಿದನು.

ತೆಕೋವದವರಲ್ಲಿ ಶ್ರೀಮಂತರಾದರೋ ತಮ್ಮ ಒಡೆಯರ ಸೇವೆಗಾಗಿ ಹೆಗಲನ್ನು ಕೊಡಲಿಲ್ಲ.

ಹೃದಯಾನಂದಕರವಾದ ದ್ರಾಕ್ಷಾರಸವನ್ನು, ಮುಖಕ್ಕೆ ಕಾಂತಿಯನ್ನು ಉಂಟುಮಾಡುವ ಎಣ್ಣೆಯನ್ನು, ಪ್ರಾಣಾಧಾರವಾದ ರೊಟ್ಟಿಯನ್ನು ಸಂಪಾದಿಸಿಕೊಳ್ಳುತ್ತಾರೆ.

¶ “ಬೆನ್ಯಾಮೀನ್ ಕುಲದವರೇ, ಯೆರೂಸಲೇಮಿನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ, ಏಕೆಂದರೆ ಉತ್ತರ ದಿಕ್ಕಿನಿಂದ ಅತಿನಾಶಕರವಾದ ವಿಪತ್ತು ತಲೆದೋರುತ್ತಿದೆ.

‹ಆದರೆ ನೀನು ಉಪವಾಸಮಾಡುವಾಗ ತಲೆಗೆ ಎಣ್ಣೆ ಹಚ್ಚಿಕೊಂಡು ಮುಖವನ್ನು ತೊಳೆದುಕೋ.›