TSK

TSK · 2 ಸಮುವೇಲನು 16:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇಷಯನು ರೊಟ್ಟಿಯನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ, ಒಂದು ಹೋತಮರಿಯನ್ನೂ, ಕತ್ತೆಯ ಮೇಲೆ ಹೇರಿಸಿ ತನ್ನ ಮಗನಾದ ದಾವೀದನ ಮುಖಾಂತರ ಸೌಲನಿಗೆ ಕಳುಹಿಸಿದನು.

ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿ, ಎರಡು ಬುದ್ದಲಿ ದ್ರಾಕ್ಷಾರಸ, ಸಿದ್ಧಮಾಡಿದ ಐದು ಕುರಿಗಳ ಮಾಂಸ, ಐವತ್ತು ಸೇರು ಹುರಿಗಾಳು, ಒಣಗಿದ ನೂರು ದ್ರಾಕ್ಷಿ ಗೊಂಚಲುಗಳು, ಅಂಜೂರ ಹಣ್ಣುಗಳು, ಇನ್ನೂರು ಉಂಡೆಗಳು ಇವುಗಳನ್ನು ಕತ್ತೆಗಳ ಮೇಲೆ ಹೇರಿಸಿ,

¶ ದಾವೀದನು ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೆಮರದ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಗುಡ್ಡವನ್ನು ಏರಿದರು.

¶ ದಾವೀದನು ಮಹನಯಿಮಿಗೆ ಬಂದಾಗ ಅಮ್ಮೋನಿಯರ ರಬ್ಬಾ ಊರಿನವನಾದ ನಾಹಾಷನ ಮಗ ಶೋಬಿ, ಲೋದೆಬಾರಿನ ಅಮ್ಮೀಯೇಲನ ಮಗನಾದ ಮಾಕೀರ್, ರೋಗೆಲೀಮ್ ಊರಿನ ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬುವರು

ಇದಲ್ಲದೆ ಇಸ್ಸಾಕಾರ್, ಜೆಬುಲೂನ್, ನಫ್ತಾಲಿ ಮೊದಲುಗೊಂಡು ಎಲ್ಲಾ ಸಮೀಪ ಪ್ರಾಂತ್ಯಗಳವರು ಎತ್ತು, ಕತ್ತೆ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಆಹಾರ ಪದಾರ್ಥಗಳನ್ನು ಹೊತ್ತುಕೊಂಡು ಬಂದರು. ಅವರು ತರತರದ ರೊಟ್ಟಿ, ಅಂಜೂರಹಣ್ಣಿನ ಉಂಡೆ, ಒಣಗಿದ ದ್ರಾಕ್ಷಿಗೊಂಚಲು, ದ್ರಾಕ್ಷಾರಸ, ಎಣ್ಣೆ, ಅನೇಕ ದನಕುರಿಗಳು ಇವುಗಳನ್ನು ತಂದರು. ಇಸ್ರಾಯೇಲರೊಳಗೆ ಮಹಾ ಸಂಭ್ರಮ ಸಂತೋಷವಿತ್ತು.

ನ್ಯಾಯಪಾಲಕನಾದ ರಾಜನು ದೇಶವನ್ನು ವೃದ್ಧಿಗೆ ತರುವನು, ಅನ್ಯಾಯವಾಗಿ ತೆರಿಗೆಯನ್ನು ಕಸಕೊಳ್ಳುವವನು ದೇಶವನ್ನು ನಾಶಮಾಡುವನು.

ವರ್ತಮಾನವನ್ನು ಕೇಳಿ ತಾವು ಅಟ್ಟಲ್ಪಟ್ಟು ಸೇರಿದ್ದ ಎಲ್ಲಾ ಸ್ಥಳಗಳಿಂದಲೂ ಯೆಹೂದಕ್ಕೆ ಹಿಂದಿರುಗಿ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಬಂದು ದ್ರಾಕ್ಷಾರಸವನ್ನೂ, ಹಣ್ಣುಗಳನ್ನೂ ಸಮೃದ್ಧಿಯಾಗಿ ಸಂಗ್ರಹಿಸಿದರು.

ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ. ಮಾಗಿದ ಹಣ್ಣನ್ನು ಕೊಯ್ದು, ದ್ರಾಕ್ಷಿಯ ಹಕ್ಕಲನ್ನು ಆಯ್ದ ತೋಟದ ಸ್ಥಿತಿಗೆ ಬಂದಿದ್ದೇನೆ. ತಿನ್ನುವುದಕ್ಕೆ ಗೊಂಚಲೇ ಇಲ್ಲ. ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣು ಸಿಕ್ಕದು.