TSK

TSK · 2 ಸಮುವೇಲನು 16:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿ, ತನ್ನ ತಂದೆಗೆ ದ್ರೋಹಿಯಾದ ಅಬೀಮೆಲೆಕನಿಗೆ ದೇವರು ಈ ರೀತಿಯಾಗಿ ಮುಯ್ಯಿತೀರಿಸಿದನು.

¶ ಸ್ವಲ್ಪ ಹೊತ್ತಾದ ಮೇಲೆ ಈ ವರ್ತಮಾನವು ದಾವೀದನಿಗೆ ಮುಟ್ಟಿತು. ಆಗ ಅವನು, “ನೇರನ ಮಗನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ, ನನ್ನ ರಾಜ್ಯವೂ ಯೆಹೋವನ ಮುಂದೆ ಸದಾ ನಿರ್ದೋಷಿಗಳು.

“ನನ್ನ ಒಡೆಯನು ನನ್ನನ್ನು ಅಪರಾಧಿಯೆಂದೆಣಿಸದಿರಲಿ. ನನ್ನ ಅರಸನು ಯೆರೂಸಲೇಮನ್ನು ಬಿಟ್ಟು ಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಲಕ್ಷಿಸದಿರಲಿ.

ಬೆನ್ಯಾಮೀನ್ಯನಾದ ಗೇರನ ಮಗನೂ ಬಹುರೀಮ್ ಊರಿನವನೂ ಆದ ಶಿಮ್ಮೀಯು ನಿನ್ನ ಬಳಿಯಲ್ಲಿರುತ್ತಾನಲ್ಲಾ. ನಾನು ಮಹನಯಿಮಿಗೆ ಹೋದಾಗ ಅವನು ನನ್ನನ್ನು ಬಹು ಕ್ರೂರವಾಗಿ ಶಪಿಸಿದನು. ಅವನು ನನ್ನನ್ನು ಎದುರುಗೊಳ್ಳುವುದಕ್ಕೆ ಯೊರ್ದನಿಗೆ ಬಂದಾಗ ನಾನು ಅವನಿಗೆ, ‘ನಿನ್ನನ್ನು ಕತ್ತಿಯಿಂದ ಕೊಲ್ಲುವುದಿಲ್ಲ’ ಎಂದು ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದೆನು.

ಅನೇಕರು ನನ್ನ ವಿಷಯದಲ್ಲಿ, “ಅವನಿಗೆ ದೇವರಿಂದ ಸಹಾಯವು ಆಗುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ. ಸೆಲಾ

ಮಿತ್ರದ್ರೋಹಿಯೂ ಆಗಿದ್ದರೆ ಶತ್ರುವು ಹಿಂದಟ್ಟಿ ಬಂದು, ನನ್ನನ್ನು ಹಿಡಿದು, ನೆಲಕ್ಕೆ ಕೆಡವಿ ತುಳಿಯಲಿ;

ಆ ಸರ್ಪವು ಅವನ ಕೈಯಿಂದ ಜೋತಾಡುವುದನ್ನು ದ್ವೀಪದವರು ನೋಡಿ; “ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯದೇವತೆಯು ಇವನನ್ನು ಬದುಕಗೊಡಿಸುವುದಿಲ್ಲವೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.