¶ ದೇವರನ್ನು ದೂಷಿಸಬಾರದು. ನಿನ್ನ ಜನರ ಅಧಿಕಾರಿಗಳನ್ನು ನೀನು ಶಪಿಸಬಾರದು.
TSK
TSK · 2 ಸಮುವೇಲನು 16:9
Treasury of Scripture Knowledge references in ಕನ್ನಡ IRV.
ಆಗ ದಾವೀದನು ಹಿತ್ತಿಯನ ಮಗನಾದ ಅಹೀಮೆಲೆಕನಿಗೂ, ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, “ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ?” ಎಂದು ಕೇಳಿದ್ದಕ್ಕೆ ಅಬೀಷೈಯು, “ನಾನು ಬರುತ್ತೇನೆ” ಎಂದು ಉತ್ತರ ಕೊಟ್ಟನು.
ಅಬ್ನೇರನು ಈ ಮಾತನ್ನು ಕೇಳಿ ಕೋಪಗೊಂಡು ಈಷ್ಬೋಶೆತನಿಗೆ, “ಈ ವರೆಗೆ ನಾನು ನಿನ್ನ ತಂದೆಯಾದ ಸೌಲನ ಕುಟುಂಬಕ್ಕೂ ಅವನ ಬಂಧು ಮಿತ್ರರಿಗೂ ದಯೆತೋರಿಸುತ್ತಿದ್ದೇನಲ್ಲಾ. ನಿನ್ನನ್ನು ದಾವೀದನ ಕೈಗೆ ಒಪ್ಪಿಸಿಕೊಡಲಿಲ್ಲವಷ್ಟೆ. ಈಗ ಈ ಹೆಂಗಸಿನ ದೆಸೆಯಿಂದ ನನ್ನಲ್ಲಿ ತಪ್ಪುಹಿಡಿಯುವುದಕ್ಕೆ ನಾನೇನು ಯೆಹೂದ ನಾಯಿಯ ತಲೆಯೋ?
ಮೆಫೀಬೋಶೆತನು ಇದನ್ನು ಕೇಳಿ ಅರಸನಿಗೆ ಸಾಷ್ಟಾಂಗನಮಸ್ಕಾರಮಾಡಿ, “ಸತ್ತ ನಾಯಿಯಂತಿರುವ ನನ್ನನ್ನು ನೀನು ಕಟಾಕ್ಷಿಸಲು ನಿನ್ನ ದಾಸನಾದ ನಾನು ಎಷ್ಟರವನು?” ಎಂದು ಹೇಳಿದನು.
¶ ಆಮೇಲೆ ಕಾರೇಹನ ಮಗನಾದ ಯೋಹಾನಾನನೂ, ಕಾಡುಮೇಡುಗಳಲ್ಲಿದ್ದ ಸಕಲ ಸೇನಾಪತಿಗಳೂ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು.
¶ ಪೌಲನು; “ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿದಿರಲಿಲ್ಲ. ನಿನ್ನ ಜನರಲ್ಲಿ ಅಧಿಪತಿಯಾಗಿರುವವನ ವಿಷಯವಾಗಿ ಕೆಟ್ಟದ್ದೇನೂ ಆಡಬಾರದೆಂದು ಬರೆದದೆಯಷ್ಟೆ” ಅಂದನು.