ಸೇವಕರಲ್ಲೊಬ್ಬನು ಅವನಿಗೆ, “ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಕಿನ್ನರಿ ನುಡಿಸಬಲ್ಲವನೂ, ಪರಾಕ್ರಮಶಾಲಿಯೂ, ಯುದ್ಧ ನಿಪುಣನೂ, ವಾಕ್ಚತುರನೂ, ಸುಂದರನೂ, ಯೆಹೋವನ ಅನುಗ್ರಹವನ್ನು ಹೊಂದಿದವನೂ ಆಗಿದ್ದಾನೆ” ಎಂದು ತಿಳಿಸಿದನು.
TSK
TSK · 2 ಸಮುವೇಲನು 17:8
Treasury of Scripture Knowledge references in ಕನ್ನಡ IRV.
ಕೂಡಲೇ ಅವನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನು ತೆಗೆದುಕೊಂಡು, ಅದರಿಂದಲೇ ಅವನ ತಲೆಯನ್ನು ಕತ್ತರಿಸಿ, ಅವನನ್ನು ಸಾಯಿಸಿದನು.
ದಾವೀದನೂ, ಅವನ ಎಲ್ಲಾ ಸೇವಕರೂ, ಎಲ್ಲಾ ಕೆರೇತ್ಯ ಮತ್ತು ಎಲ್ಲಾ ಪೆಲೇತ್ಯ ಎಂಬ ಕಾವಲು ದಂಡುಗಳೂ, ಗತ್ ಊರಿನಿಂದ ಅರಸನ ಜೊತೆಯಲ್ಲಿ ಬಂದಿದ್ದ ಆರುನೂರು ಗಿತ್ತೀಯರೂ ಅರಸನ ಮುಂದೆ ಹಾದು ಹೋದರು.
¶ ದಾವೀದನೊಂದಿಗಿದ್ದ ರಣವೀರರ ಪಟ್ಟಿ: ತಹ್ಕೆಮೋನ್ಯನಾದ ಯೋಷಬ್ ಬಷ್ಬೆಬೆತನು ಸರದಾರರಲ್ಲಿ ಮುಖ್ಯಸ್ಥನು. ಎಚ್ನೀಯನಾದ ಅದೀನೋ ಅನ್ನಿಸಿಕೊಳ್ಳುವ ಇವನು ಒಂದೇ ಸಾರಿ ಎಂಟುನೂರು ಮಂದಿಯನ್ನು ಕೊಂದನು.
¶ ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಜನರಲ್ಲಿ ಮುಖ್ಯಸ್ಥನು. ಅವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ, ಮುನ್ನೂರು ಜನರನ್ನು ಕೊಂದು ಈ ಮೂವರಲ್ಲಿ ಕೀರ್ತಿಹೊಂದಿದನು.
ಅವನು ಅವರ ಕಡೆಗೆ ತಿರುಗಿಕೊಂಡು ಯೆಹೋವನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣು ಕರಡಿಗಳು ಬಂದು ಆ ಹುಡುಗರಲ್ಲಿ ನಲ್ವತ್ತೆರಡು ಮಂದಿಯನ್ನು ಹರಿದುಬಿಟ್ಟವು.
ಮೂರ್ಖತನದಲ್ಲಿ ಮುಳುಗಿರುವ ಮೂಢನನ್ನು ಎದುರಾಗುವುದಕ್ಕಿಂತಲೂ, ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಎದುರಾಗುವುದು ಲೇಸು.
ಆಹಾ, ಇನ್ನೊಂದು ಮೃಗ ಎರಡನೆಯದು; ಅದು ಕರಡಿಯ ಹಾಗಿತ್ತು, ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು; ನೀನೆದ್ದು ಬೇಕಾದಷ್ಟು ಮಾಂಸವನ್ನು ತಿನ್ನು ಎಂದು ಅದಕ್ಕೆ ಹೇಳೋಣವಾಯಿತು.
¶ ಇನ್ನೂ ಏನು ಹೇಳಬೇಕು? ಗಿದ್ಯೋನ್, ಬಾರಾಕ ಸಂಸೋನ, ಯೆಪ್ತಾಹ, ದಾವೀದ, ಸಮುವೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು.